ಶಿವಮೊಗ್ಗ, ತೀರ್ಥಹಳ್ಳಿಯ ವಿದ್ಯಾರ್ಥಿನಿಯೊಬ್ಬರು, ನೆರೆಯ ಶೃಂಗೇರಿಯಲ್ಲಿ ನಿನ್ನೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
22 ವರ್ಷದ ವಿದ್ಯಾರ್ಥಿನಿ ದಿಶಾ ಮೃತಪಟ್ಟವರು. ಶೃಂಗೇರಿಯ ಇಲ್ಲಿನ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ಬಿ.ಕಾಂ ಪದವಿ ವ್ಯಾಸಂಗ ಮಾಡುತ್ತಿದ್ದ ಇದ್ದ ಇವರು ಶೃಂಗೇರಿ ಪೇಟೆಯಲ್ಲಿ ಬಿಸಿಎಂ ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು.
ಹಾಸ್ಟೆಲ್‌ನಲ್ಲಿರುವಾಗಲೇ ದಿಶಾರಿಗೆ ಹಠಾತ್ತನೆ ಎದೆನೋವು ಕಾಣಿಸಿಕೊಂಡಿದೆ.ಪರಿಣಾಮ ಅವರು ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರ ಸಹಪಾಠಿಗಳು ಸಹಾಯಕ್ಕೆ ಧಾವಿಸಿದ್ದರೂ, ಅದಾಗಲೇ ದಿಶಾ ಅವರು ಕೊನೆಯುಸಿರೆಳೆದಿದ್ದರು.
ಮೃತ ದಿಶಾ ತೀರ್ಥಹಳ್ಳಿ ತಾಲೂಕಿನವರಾಗಿದ್ದಾರೆ. ಈ ಅಕಾಲಿಕ ಸಾವಿನ ಸುದ್ದಿಯು ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅವರ ಕುಟುಂಬದ ಸದಸ್ಯರಲ್ಲಿ ತೀವ್ರ ಆಘಾತ ಮತ್ತು ದುಃಖವನ್ನುಂಟುಮಾಡಿದೆ.
ಘಟನೆಗೆ ಸಂಬಂಧಿಸಿದಂತೆ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



