ಶಿವಮೊಗ್ಗ, ಜಿಲ್ಲೆಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಇಂದು ಭಾನುವಾರ, 0 ರಿಂದ 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ಲಸಿಕೆ ಕಾರ್ಯಕ್ರಮ ನಡೆಯುತ್ತಿದೆ ಅದರಂತೆ ಶಿವಮೊಗ್ಗ ಜಿಲ್ಲೆಯಲ್ಲಿ 0 ರಿಂದ 5 ವರ್ಷದ ಒಳಗಿನ 145255 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.
ಜೊತೆಗೆ ಅತೀ ಸೂಕ್ಷ್ಮ ಪ್ರದೇಶಗಳೆಂದು ಗುತುತಿಸಲ್ಪಟ್ಟ ಕೊಳಚೆ ಪ್ರದೇಶ, ಅಲೆಮಾರಿ ಜನಾಂಗ, ಇಟ್ಟಿಗೆ ಬಟ್ಟಿಗಳು, ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರ ವಸತಿ ಪ್ರದೇಶಗಳನ್ನೊಳಗೊಂಡು ಬಸ್ಸು ನಿಲ್ದಾಣ, ರೈಲ್ವೆ ನಿಲ್ದಾಣಗಳು ಸೇರಿದಂತೆ ಜಿಲ್ಲೆಯಾದ್ಯಂತ ಒಟ್ಟು 1016 ಲಸಿಕಾ ಬೂತ್‌ಗಳಲ್ಲಿ ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಇದರಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಯವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಇತರೆ ಸಂಘ ಸಂಸ್ಥೆಗಳ ಪ್ರತಿನಿಧಿಗಳು ವ್ಯಾಕ್ಸಿನೇಟರ್‌ಗಳಾಗಿ ಕಾರ್ಯನಿರ್ವಹಿಸುತ್ತಾರೆ.
ಪಲ್ಸ್ ಪೋಲಿಯೋ ಲಸಿಕೆ ನೀಡಲು ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ, ಅಂಗನವಾಡಿಗಳಲ್ಲಿ, ಶಾಲೆಗಳಲ್ಲಿ ಲಸಿಕಾ ಬೂತ್‌ಗಳನ್ನು ತೆರೆಯಲಾಗಿದೆ. ಪ್ರತಿಯೊಂದು ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ಮತ್ತು ಮೇಲ್ವಿಚಾರಕರನ್ನು ನೇಮಿಸಿ ಕಾರ್ಯಕ್ರಮ ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗಿದೆ.
ಸಾರ್ವಜನಿಕರು ಈ ಹಿಂದೆ 5 ವರ್ಷದ ಒಳಗಿನ ಮಕ್ಕಳಿಗೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಡಿಸೆಂಬರ್ 21 ರ ಭಾನುವಾರದಂದು ಇಂದು ಪುನಃ ಪೋಲಿಯೋ ಲಸಿಕೆ ಹಾಕಿಸಬೇಕು.
ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಎಲ್ಲಾ ಲಸಿಕಾ ಬೂತ್‌ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು 0-5 ವರ್ಷದ ಮಕ್ಕಳಿಗೆ ಉಚಿತವಾಗಿ ನೀಡಲಗುತ್ತಿದೆ.

ಇಂದು ಶಿವಮೊಗ್ಗ ನಗರದ ಭೂಪಾಳಂ ಹಾಗೂ ಎಸ್ ಪಿ ಎಂ ರಸ್ತೆಯಲ್ಲಿರುವ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಗ್ಯಾರಂಟಿ ಸಮಿತಿ ಸದಸ್ಯರಾದ ಅರ್ಚನ ನಿರಂಜನ್ ಸಹ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಪುಟ್ಟ ಪುಟ್ಟ ಮಕ್ಕಳಿಗೆ ಲಸಿಕೆ ಹಾಕಿದರು.
ನಂತರ ಮಾತನಾಡಿ ಪೋಷಕರು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ ಎಂದರು. ಕೆಲವು ಮಕ್ಕಳು ಅಳುತ್ತ ಹೆದರಿಕೊಂಡು ಲಸಿಕೆ ಹಾಕಿಸಿಕೊಂಡರೆ ಮತ್ತಷ್ಟು ಮಕ್ಕಳು ಖುಷಿಯಿಂದ ಹಾಕಿಸಿಕೊಂಡರು, ಹಾಗೂ ಇಲ್ಲಿಯ ವೈದ್ಯರಾದ ಪ್ರಕಾಶ್ ಹಾಗೂ ಸಿಬ್ಬಂದಿಗಳು ಉತ್ತಮವಾಗಿ ಸ್ಪಂದಿಸಿದರು ಕಾರ್ಯಕ್ರಮ ಅಚ್ಚುಕಟ್ಟಾಗಿ ಚೆನ್ನಾಗಿ ನಡೆಯುತ್ತಿದೆ.
ಇಂದು ಈ ಕಾರ್ಯಕ್ರಮದಲ್ಲಿ ನಾನು ಸಹ ಭಾಗಿಯಾಗಿರುವುದು ಸಂತಸವಾಗಿದೆ ಎಂದರು.



