ಭುವನೇಶ್ವರ, ಒಡಿಶಾದಲ್ಲಿ ಮತ್ತೊಂದು ಬೃಹತ್ ನಕ್ಸಲ್ ಎನ್ಕೌಂಟರ್ ನಡೆದಿದ್ದು, ಬರೊಬ್ಬರಿ 1.1 ಕೋಟಿ ರೂ ಇನಾಮು ಹೊಂದಿದ್ದ ನಕ್ಸಲ್ ನಾಯಕ ಗಣೇಶ್ ಉಯ್ಕೆ ಸೇರಿ ನಾಲ್ವರನ್ನು ಹೊಡೆದುರುಳಿಸಲಾಗಿದೆ.
ಒಡಿಶಾದ ಕಂಧಮಾಲ್‌ನಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಕುಖ್ಯಾತ ನಕ್ಸಲ್ ನಾಯಕ ಗಣೇಶ್ ಉಯ್ಕೆ ಸೇರಿದಂತೆ 4 ಮಂದಿ ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಿಗ್ಗೆ 9 ಗಂಟೆಗೆ, ಭದ್ರತಾ ಪಡೆಗಳು ರಂಭಾ ಅರಣ್ಯ ವ್ಯಾಪ್ತಿಯಲ್ಲಿ ಸಶಸ್ತ್ರ ಮಾವೋವಾದಿ ಪಡೆಯನ್ನು ಎದುರಿಸಿತು. ಈ ವೇಳೆ ಮಾವೋವಾದಿಗಳು ಗುಂಡು ಹಾರಿಸಿದರು. ಇದಕ್ಕೆ ಪ್ರತಿಯಾಗಿ ಭದ್ರತಾ ಸಿಬ್ಬಂದಿಗಳೂ ಕೂಡ ಪ್ರತಿ ದಾಳಿ ನಡೆಸಿದರು.ಮಧ್ಯಾಹ್ನದ ಹೊತ್ತಿಗೆ, ಭದ್ರತಾ ಪಡೆಗಳು ಗಣೇಶ್ ಉಯ್ಕೆ ಸೇರಿದಂತೆ ನಾಲ್ವರು ಮಾವೋವಾದಿಗಳ ಮೃತದೇಹಗಳನ್ನು ಸ್ಥಳದಿಂದ ವಶಪಡಿಸಿಕೊಂಡವು.
ಭದ್ರತಾ ಸಿಬ್ಬಂದಿ ಎರಡು INSAS ರೈಫಲ್‌ಗಳು ಮತ್ತು 303 ರೈಫಲ್ ಸೇರಿದಂತೆ ಹೆಚ್ಚಿನ ಸಾಮರ್ಥ್ಯದ ಶಸ್ತ್ರಾಸ್ತ್ರಗಳನ್ನು ಸ್ಥಳದಿಂದ ವಶಪಡಿಸಿಕೊಂಡರು ಎಂದು ತಿಳಿದುಬಂದಿದೆ.



