ಶಿವಮೊಗ್ಗ | ಅಡಿಕೆ ಕೊನೆ ಕೊಯ್ಯುವಾಗ ವಿದ್ಯುತ್ ಶಾಕ್ ; ಓರ್ವ ಸಾವು ; ಸೂಕ್ತ ಪರಿಹಾರಕ್ಕೆ ನಿರ್ದೇಶಿಸಿದ ಸಚಿವರು

ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕು ತ್ರಿಣಿವೆ ಗ್ರಾಮ ಪಂಚಾಯಿತಿ ಮಂಡ್ರಳ್ಳಿಯ 48 ವರ್ಷದ ಪುಟ್ಟಸ್ವಾಮಿಯವರು ಉಡುಪ ಅವರ ಅಡಿಕೆ ತೋಟದಲ್ಲಿ ಅಡಿಕೆ ಗೊನೆ ಕೊಯ್ಯುವ ವೇಳೆ ದೋಟಿಗೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ವಿಚಾರ ತಿಳಿದು ಆಸ್ಪತ್ರೆಯ ಮರಣೋತ್ತರ ಪರೀಕ್ಷೆ ಕೊಠಡಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ತೆರಳಿ ಅಧಿಕಾರಿಗಳಿಂದ ಮಾಹಿತಿ ಪಡೆದು, ಸೂಕ್ತ ಪರಿಹಾರ ಒದಗಿಸುವಂತೆ ಸೂಚಿಸಿದರು.

ಇನ್ನೋರ್ವ ವ್ಯಕ್ತಿಗೂ ವಿದ್ಯುತ್ ಪ್ರವಹಿಸಿದ್ದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗೆ ಕರೆ ಮಾಡಿ ತಿಳಿಸಿದರು.

Author