ಶಿವಮೊಗ್ಗ | ಶಾಲಾ, ಕಾಲೇಜುಗಳಲ್ಲಿ ಅಶ್ಲೀಲ ಗೀತೆಗಳ ನೃತ್ಯಕ್ಕೆ, ಅವಕಾಶ ನೀಡಬಾರದು : ಕರವೇ ಸ್ವಾಭಿಮಾನಿ ಬಣ ಮನವಿ

ಶಿವಮೊಗ್ಗ

ಶಿವಮೊಗ್ಗ, ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಗಳಲ್ಲಿ ಅಶ್ಲೀಲ ಗೀತೆಗಳಿಗೆ ನೃತ್ಯ ಮಾಡುವುದನ್ನು ನಿಷೇಧ ಮಾಡುವಂತೆ ಹಾಗೂ ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಹೀಗಾಗಿ ಇಂದು ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಸಂಸ್ಕೃತಿ ಕಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಶಾಲೆ ಹಾಗೂ ಕಾಲೇಜುಗಳು ಅದರ ಕೇಂದ್ರಗಳಾಗಿವೆ.

ಆದರೆ ಕೆಲವು ಖಾಸಗಿ ಶಾಲಾ-ಕಾಲೇಜುಗಳು ಶಾಲಾ ಕಾಲೇಜುಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಒಳ್ಳೆಯ ದೇಶಭಕ್ತಿ ಗೀತೆ ಭಾವಗೀತೆ ಕನ್ನಡ ನಾಡು ನುಡಿಗಳ ಗೀತೆಗಳಿಗೆ ಆದ್ಯತೆ ನೀಡದೆ ಅಶ್ಲೀಲ ಗೀತೆಗಳಿಗೆ ನೃತ್ಯ ಮಾಡುತ್ತಿರುವುದು ಪ್ರತಿ ವರ್ಷ ಕಂಡುಬರುತ್ತದೆ.

ಈ ವರ್ಷದಿಂದ ಯಾವುದೇ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರು ಮಕ್ಕಳಿಗೆ ಅಶ್ಲೀಲ ಗೀತೆಗಳಿಗೆ ನೃತ್ಯ ಮಾಡಿಸಬಾರದು. ಒಂದು ವೇಳೆ ಮಾಡಿಸಿದ್ದೆ ಆದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಹೋರಾಟಕ್ಕಿಳಿಯುವುದು ಅನಿವಾರ್ಯ ಆದ್ದರಿಂದ ತಾವುಗಳು ಇದಕ್ಕೆ ಅವಕಾಶ ಮಾಡಿಕೊಡದೆ ಶಿವಮೊಗ್ಗ ಜಿಲ್ಲೆಯಲ್ಲಿರುವ ಎಲ್ಲಾ ಶಾಲಾ ಕಾಲೇಜುಗಳಿಗೆ ಆದೇಶ ನೀಡಬೇಕೆಂದು ತಮ್ಮಲ್ಲಿ ವೇದಿಕೆಯು ಮನವಿ ಮಾಡಿಕೊಳ್ಳುತ್ತದೆ.

ಹಾಗೂ ಶಿಕ್ಷಣ ಸಚಿವರು ಈ ವಿಚಾರವಾಗಿ ಸೂಕ್ತ ಆದೇಶವನ್ನು ತಕ್ಷಣವೇ ಹೊರಡಿಸಬೇಕೆಂದು ಸಂಘಟನೆಯು ಆಗ್ರಹಿಸುತ್ತದೆ ಎಂದಿದೆ.

ಈ ಮೇಲ್ಕಂಡ ವಿಚಾರ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಉಪನಿರ್ದೇಶಕರಿಗೆ ಮತ್ತು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕರವೇ ಸ್ವಾಭಿಮಾನಿ ಬಣ ಮನವಿ ನೀಡಿದೆ.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ಎಚ್ಎಸ್ ರವರು, ಜಿಲ್ಲಾ ಉಪಾಧ್ಯಕ್ಷರಾದ ಮುಜಿಬುಲ್ಲ, ವಿಜಯ್ ಕುಮಾರ್ .ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ,ವಿಜಯಕುಮಾರ್, ಮಹಿಳಾ ಅಧ್ಯಕ್ಷರಾದ ಕವಿತಾ ಸಿ, ಜ್ಯೋತಿ ಎನ್, ಪದ್ಮ ಎನ್, ನೂರುಲ್ಲಖಾನ್, ಸಂತೋಷ, ಪ್ರವೀಣ್ ಕುಮಾರ್, ಆರತಿ ತಿವಾರಿ, ಸತೀಶಣ್ಣ ಪದ್ಮ ಎನ್, ಆರತಿ ತಿವಾರಿ, ಅಶ್ವಥ್, ಅನ್ಸರ್ ಪಾಷಾ, ಸಾದಿಕ್ ಇತರರು ಹಾಜರಿದ್ದರು.

Author