ಶಿವಮೊಗ್ಗದಲ್ಲಿ ಎಂ.ಡಿ. ವ್ಯಾಸಾಂಗ ಮಾಡುತ್ತಿದ್ದ ವೈದ್ಯ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
SIMS ಹಾಸ್ಟೆಲ್ ನಲ್ಲೇ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ ಸಂದೀಪ್ ರಾಜ್ (27).
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ತರಬೇತಿ ವೈದ್ಯನಾಗಿ ಸೇವೆ ಸಲ್ಲಿಸುತ್ತಿದ್ದ ವಿದ್ಯಾರ್ಥಿ ಶಿವಮೊಗ್ಗ ಸಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿ ಅಂತಿಮ ವರ್ಷದ ಎಂ.ಡಿ. ರೆಡಿಯಾಲಜಿ ವ್ಯಾಸಾಂಗ ಮಾಡುತ್ತಿದ್ದ ಸಂದೀಪ್ ಮೆಡಿಕಲ್ ಕಾಲೇಜಿನ ಭದ್ರಾ ಹಾಸ್ಟೆಲ್ ನ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೂಲತಃ ತುಮಕೂರಿನ ಮಧುಗಿರಿಯವನಾದ ಸಂದೀಪ್ ರಾಜ್ ಎಂಬಿಬಿಎಸ್ ಮುಗಿಸಿ ಎಂ.ಡಿ. ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯು ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು ಎಂಬ ಮಾಹಿತಿಯಾಗಿದೆ.
ಈ ಸಂಬಂಧ ಶಿವಮೊಗ್ಗದ ಖಾಸಗಿ ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.



