ಶಿವಮೊಗ್ಗ | ಹೆಡ್ ಕಾನ್ಸ್ಟೆಬಲ್ ನಾಸಿರ್, ಸಹ ಸಿಬ್ಬಂದಿ ಕಿಂಡಲ್ ಮಾಡಿದ್ದಕ್ಕೆ, ಆತ್ಮಹತ್ಯೆ ಮಾಡಿಕೊಂಡರ?

ಶಿವಮೊಗ್ಗ

ಶಿವಮೊಗ್ಗದ ಆರ್ ಎಂ ಎಲ್ ನಗರದ ನಿವಾಸಿ ಹಾಗೂ ಸಂಚಾರಿ ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್ಸ್ಟೇಬಲ್ ನೇಣಿಗೆ ಶರಣಾಗಿದ್ದಾರೆ.

ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.

ಶಿವಮೊಗ್ಗ ಖಾಸಗಿ ಬಸ್ ಸ್ಟ್ಯಾಂಡ್ ಪಕ್ಕದಲ್ಲಿ ಇರುವ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲೇ ಮಹಮ್ಮದ್ ಜಕ್ರೀಯಾ(55)ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೆಡ್ ಕಾನ್ಸ್ ಟೇಬಲ್ ಅವರು ಒಂದು ತಿಂಗಳು ರಜೆ ಯಲ್ಲಿದ್ದು ಎರಡು ದಿನದ ಹಿಂದೆ ಡ್ಯೂಟಿಗೆ ಬಂದಿದ್ದ ಮಹಮ್ಮದ್ ಜಕ್ರೀಯಾ ಅವರು ಸಹ ಸಿಬ್ಬಂದಿ ನಾಸೀರ್ ಅಹಮ್ಮದ್ ಕಿಂಡಲ್ ಮಾಡುತ್ತಿದ್ದ ಎಂದು ಡೇತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿಯಾಗಿದೆ.

ಪಶ್ಚಿಮ ಸಂಚಾರ ಪೊಲೀಸ್ ಠಾಣೆಗೆ ಎಸ್ಪಿ ನಿಖಿಲ್ ಭೇಟಿ ಪರಿಶೀಲನೆ ನಡೆಸಿದ್ದಾರೆ.

ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Author