ಶಿವಮೊಗ್ಗ | ಭೀಕರ ರಸ್ತೆ ಅಪಘಾತ ; ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ, ಸಮೀಪದ ಗರ್ತಿಕೆರೆ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತನನ್ನು ಗರ್ತಿಕೆರೆ ಸಮೀಪದ ಸುಣ್ಣದಬಸ್ತಿ ಗ್ರಾಮದ ನಿವಾಸಿ ನಯಾಜ್ (30) ಎಂದು ಗುರುತಿಸಲಾಗಿದೆ.

ಸುಣ್ಣದಬಸ್ತಿ ಬಸ್ ನಿಲ್ದಾಣದ ಬಳಿ ರಿಪ್ಪನ್‌ಪೇಟೆಯಿಂದ ಕೋಣಂದೂರು ಕಡೆಗೆ ಸಾಗುತ್ತಿದ್ದ ಜಂಬಿಟ್ಟಿಗೆ ಲಾರಿ ನಯಾಜ್ ಅವರ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ನಯಾಜ್ ತೀರ್ಥಹಳ್ಳಿಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತ್ತಿದ್ದ ಬಸ್‌ಗೆ ಪಾರ್ಸಲ್ ಹಾಕಲು ರಸ್ತೆ ದಾಟುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಪಿಎಸ್‌ಐ ರಾಜು ರೆಡ್ಡಿ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Author