ಶಿವಮೊಗ್ಗ, ರಾಜ್ಯಸರ್ಕಾರ ಅನುಷ್ಠಾನಗೊಳಿಸಿರುವ ಗ್ಯಾರಂಟಿ ಯೋಜನೆಗಳು ಫಲಾನುಭವಿ ಗಳ ಜಿಲ್ಲಾಮಟ್ಟದ ಕಾರ್ಯಾಗಾರವನ್ನು ( ಸಮಾವೇಶ )ದಿನಾಂಕ 21-01-2026ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಗೋಪಿ ಸರ್ಕಲ್ ಯಿಂದ ಗ್ಯಾರೆಂಟಿ ಯೋಜನೆ ಮಾಹಿತಿಯ ಚಿತ್ರಗಳ ಮೆರವಣಿಗೆ ಆರಂಭವಾಗಿ ಬಾಲರಾಜ್ ಅರಸ್ ರಸ್ತೆ ಮುಖಾಂತರ 10-30 ಗಂಟೆಗೆ ಕುವೆಂಪು ರಂಗಮಂದಿರ ತಲುಪಿದ ನಂತರ ವೇದಿಕೆ ಕಾರ್ಯಕ್ರಮ ಆಯೋಜಿಸಬೇಕೆಂದು ಗ್ಯಾರಂಟಿ ಯೋಜನೆಗಳು ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯಿಸಿದೆ.
ದಿನಾಂಕ 13-01-2026 ಮಂಗಳವಾರ ಬೆಳಿಗ್ಗೆ ಶಿವಮೊಗ್ಗಜಿಲ್ಲಾ ಪಂಚಾಯತ್ ಕಛೇರಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಮತ್ತು ವಿಧಾನ ಪರಿಷತ್ತಿನ ಶಾಸಕರಾಗಿರುವಶ್ರೀ ದಿನೇಶ್ ಗೋಳಿಗೌಡರ ಅಧ್ಯಕ್ಷತೆಯಲ್ಲಿ ಮತ್ತು ಜಿಲ್ಲಾ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ರವರ ಉಪಸ್ಥಿತಿಯಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ನಿರ್ಣಯಿಸಲಾಗಿದೆ.
ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಲಿಕಟ್ಟಿ ಮತ್ತು ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹೇಮಂತ್ .ಎನ್ ರವರು ಉಪಸ್ಥಿತರಿದ್ದರು.
ಜಿಲ್ಲಾ ಪಂಚ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷರುಸದಸ್ಯರು ಮತ್ತು ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು / ಸದಸ್ಯರು ಮತ್ತು ಜಿಲ್ಲಾ ಪಂಚಾಯತ್ ಅಧಿಕಾರಿಗಳು ಜೊತೆಗೆಗ್ಯಾರೆಂಟಿ ಯೋಜನೆಗೆ ಸಂಬಂಧಿಸಿದ ಐದು ಇಲಾಖೆಗಳ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.



