ಶಿವಮೊಗ್ಗ | ಕೂಡ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

ಶಿವಮೊಗ್ಗ

ಶಿವಮೊಗ್ಗ ತಾಲ್ಲೂಕು ಕೂಡ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-26ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ದಿನಾಂಕ 17 ಜನವರಿ 2026 (ಶನಿವಾರ) ರಂದು ಸಂಜೆ 5.00 ಗಂಟೆಗೆ ಕೂಡ್ಲಿಯ ಶ್ರೀ ಪಾರ್ವತಿ ಬ್ರಹ್ಮ ಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾ ಪ್ರದರ್ಶನ ಹಾಗೂ ವಿವಿಧ ಶೈಕ್ಷಣಿಕ ಚಟುವಟಿಕೆಗಳು ನಡೆಯಲಿವೆ. ಗ್ರಾಮಸ್ಥರು, ಪೋಷಕರು, ಹಳೆಯ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಶಾಲೆಯ ಮುಖ್ಯ ಶಿಕ್ಷಕರಾದ ಉಮೇಶಪ್ಪ ಅವರು ತಿಳಿಸಿದ್ದಾರೆ.

ಅದೇ ರೀತಿ, ಹೊಳೆ ಬೆನವಳ್ಳಿ ಕ್ಲಸ್ಟರ್‌ನ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು,ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಕಾರ್ಯಕ್ರಮಕ್ಕೆ ಆಗಮಿಸಿ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಶಾಲಾ ಅಭಿವೃದ್ಧಿಗೆ ಸಾರ್ವಜನಿಕರ ಸಹಕಾರ ಅತ್ಯವಶ್ಯಕವಾಗಿದ್ದು, ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅವರು ಸರ್ವರಿಗೂ ಆತ್ಮೀಯವಾಗಿ ಸುಸ್ವಾಗತ ಕೋರಿದ್ದಾರೆ.

Author