ಮೈಸೂರು | ಮಹಿಳಾ ಅಧಿಕಾರಿಗೆ ತಲೆ ತೆಗಿತೇನೆ ಎಂದು ಕೊಲೆ ಬೆದರಿಕೆ

ಮೈಸೂರು

ಮೈಸೂರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರವಾದ ವರುಣಾದಲ್ಲಿ ಮಹಿಳಾ ಅಧಿಕಾರಿಗೆ ತಲೆ ತೆಗಿತೇನೆ ಎಂದು ಕೊಲೆ ಬೆದರಿಕೆ ಹಾಕಿರುವ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದ್ದು FIR ದಾಖಲಾಗಿದೆ.

ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ‘ನಿಮ್ಹಾನ್ಸ್’ ರೀತಿಯ ಸಂಸ್ಥೆ ಸ್ಥಾಪಿಸಲು ವರುಣಾ ಹೋಬಳಿಯ ಗುಡಮಾದನಹಳ್ಳಿ ಗ್ರಾಮದ ಸರ್ವೆ ನಂ. 8, 60 ಮತ್ತು 68 ರಲ್ಲಿ ಒಟ್ಟು 20 ಎಕರೆ ಜಮೀನನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ಹಸ್ತಾಂತರಿಸಬೇಕಿತ್ತು ಇದರ ಸಲುವಾಗಿ ಡಿಸೆಂಬರ್ 31, 2025 ರಂದು ಬೆಳಿಗ್ಗೆ 11:10ಕ್ಕೆ ಗ್ರಾಮ ಆಡಳಿತಾಧಿಕಾರಿ ಭವ್ಯ .ಜಿ ಮತ್ತು ಗ್ರಾಮ ಸಹಾಯಕ ನವೀನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದಾಗ ಈ ಘಟನೆ ಸಂಭವಿಸಿದೆ.

ಜಮೀನು ಪರಿಶೀಲನೆ ವೇಳೆ ಏಕಾಏಕಿ ಮಹಿಳಾ ಅಧಿಕಾರಿಯ ಮೇಲೆ ನುಗ್ಗಿ ಬಂದ ಗುಡಮಾದನಹಳ್ಳಿ ನಿವಾಸಿ ಜಿ.ಎಂ ಪುಟ್ಟಸ್ವಾಮಿ (ಬೆಣ್ಣೆ ಪುಟ್ಟಸ್ವಾಮಿ), ಭವ್ಯ ಅವರಿಗೆ ಏಕವಚನದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ನಿನ್ನ ತಲೆಗೆ ತೆಗೆಯುತ್ತೇನೆ ‌ ಹಾಗೆ ತಹಸಿಲ್ದಾರ್ ತಲೆ ಕೂಡ ತೆಗೆಯುತ್ತೇನೆ ಎಂದು ನಿಂದಿಸಿದ್ದಾನೆ.

ಯಾರನ್ನು ಕೇಳಿ ಜಮೀನು ಮಂಜೂರು ಮಾಡಿದ್ದೀರಿ? ಮೊದಲು ನಿಮ್ಮ ತಹಶೀಲ್ದಾರ್ ತಲೆಯನ್ನು ತೆಗೆಯಬೇಕು ಹಾಗೂ ನಿನ್ನನ್ನೂ ಇಲ್ಲೇ ಕೊಂದು ಹಾಕುತ್ತೇನೆ’ ಅಧಿಕಾರಿ ಭವ್ಯ ಅವರ ಮೇಲೆ ಹಲ್ಲೆ ಮಾಡಲು ಮುಂದಾದಾಗ, ಅದನ್ನು ತಡೆಯಲು ಬಂದ ಗ್ರಾಮ ಸಹಾಯಕ ನವೀನ್ ಕುಮಾರ್ ಅವರನ್ನು ಜೋರಾಗಿ ತಳ್ಳಲಾಗಿದೆ.

ಜೊತೆಗೆ, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ, ನವೀನ್ ಅವರು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದ ವಿಡಿಯೋವನ್ನು ಬಲವಂತವಾಗಿ ಕಸಿದುಕೊಂಡು, ಅದನ್ನು ರಘು ಎಂಬುವವರ ಕೈಗೆ ನೀಡಿ ಡಿಲೀಟ್ ಮಾಡಿಸಿದ್ದಾರೆ ಎಂದು ಎಪ್ ಐ‌ ಆರ್ ನಲ್ಲಿ ದಾಖಲಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ವಿಡಿಯೋ ಕೂಡ ವೈರಲ್ ಆಗಿದೆ.

Author