ಶಿವಮೊಗ್ಗ | ಭದ್ರಾ ಎಡದಂಡೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ

ಶಿವಮೊಗ್ಗ

ಶಿವಮೊಗ್ಗ, ಹೊಳೆಹೊನ್ನೂರಿನ ಭದ್ರಾ ಎಡದಂಡೆ ನಾಲೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದಾರೆ. ನಾಲ್ವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.ಭದ್ರಾವತಿ ತಾಲೂಕು ಅರಬಿಳಚಿ ಕ್ಯಾಂಪ್‌ನಲ್ಲಿ ಘಟನೆ ಸಂಭವಿಸಿದೆ.

ನೀಲಾಬಾಯಿ, ಅವರ ಮಗ ರವಿಕುಮಾರ್‌, ಮಗಳು ಶ್ವೇತಾ, ಅಳಿಯ ಪರಶುರಾಮ್‌ ನಾಪತ್ತೆಯಾಗಿದ್ದಾರೆ.ಭದ್ರಾ ಎಡದಂಡೆ ನಾಲೆಯಲ್ಲಿ ಬಟ್ಟೆ ಒಗೆಯಲು ಬಂದಿದ್ದಾಗ ಘಟನೆ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ನಾಲೆಗೆ ಜಾರಿ ಒಬ್ಬರ ರಕ್ಷಣೆಗೆ ಮತ್ತೊಬ್ಬರು ಅವರ ಹಿಂದೆ ಇನ್ನೊಬ್ಬರು ಎಂಬಂತೆ ನಾಲೆಗೆ ಇಳಿದಿರುವ ಸಾಧ್ಯತೆ ಇದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಸದ್ಯ ನಾಲ್ವರ ಶೋಧ ಕಾರ್ಯ ನಡೆಯುತ್ತಿದ್ದು, ಘಟನೆಗೆ ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ.

ಜಾತ್ರೆ ಹಿನ್ನೆಲೆ ಅಳಿಯ ಪರಶುರಾಮ್‌ ಅವರು ಮಾವನ ಮನೆಗೆ ಬಂದಿದ್ದರು ಎಂದು ತಿಳಿದು ಬಂದಿದೆ. ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಹೆಚ್ಚುವರಿ ರಕ್ಷಣಾಧಿಕಾರಿ ಎ.ಜಿ.ಕಾರಿಯಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Author