ಶಿವಮೊಗ್ಗ | ಟಿಟಿ ಮತ್ತು ಖಾಸಗಿ ಬಸ್ ನಡುವೆ ಅಪಘಾತ

ಶಿವಮೊಗ್ಗ

ಶಿವಮೊಗ್ಗ ನಗರದ ತುಂಗಾ ಸೇತುವೆಯ ಮೇಲೆ ಖಾಸಗಿ ಬಸ್ ಹಾಗೂ ಟಿಟಿ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಟಿಟಿ ಚಾಲಕ ಗಾಯಗೊಂಡಿರುವ ಘಟನೆ ನೆನ್ನೆ ದಿವಸ ನಡೆದಿದೆ.

ಬಳ್ಳಾರಿ ಕಡೆಯಿಂದ ನಗರಕ್ಕೆ ಪ್ರವೇಶಿಸುತ್ತಿದ್ದ ಟಿಟಿ ವಾಹನ ಹಾಗೂ ಸಹ್ಯಾದ್ರಿ ಕಾಲೇಜು ಕಡೆಯಿಂದ ಸಂಚರಿಸುತ್ತಿದ್ದ ಖಾಸಗಿ ಬಸ್ ನಡುವೆ ಸೇತುವೆಯ ಮೇಲೆಯೇ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಟಿಟಿ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಘಟನೆ ನಡೆದ ತಕ್ಷಣ ಸ್ಥಳೀಯರು ಗಾಯಾಳು ಚಾಲಕನನ್ನು ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸೇತುವೆಯ ಮಧ್ಯೆಯೇ ಅಪಘಾತ ಸಂಭವಿಸಿದ ಕಾರಣ, ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.ಶಿವಮೊಗ್ಗ ಸಂಚಾರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Author