ಶಿವಮೊಗ್ಗ,ಇಂದು ಸಂಜಯ್ ಮೆಮೊರಿಯಲ್ ಪಾಲಿಟೆಕ್ನಿಕ್ ನಲ್ಲಿ ಕಾಗೋಡು ತಿಮ್ಮಪ್ಪನವರು ಸರ್ ಎಂ ವಿಶ್ವೇಶ್ವರಯ್ಯನವರ ಪುತ್ತಳಿಯನ್ನು ಅನಾವರಣವನ್ನು ಕಾರ್ಯ ನೆರವೇರಿಸಿದ್ದರು.
ಈ ಕಾರ್ಯಕ್ರಮವನ್ನು ಕಾಲೇಜಿನ ವ್ಯವಸ್ಥಾಪಕ ಮಂಡಳಿ ಮತ್ತು ಹಳೆ ವಿದ್ಯಾರ್ಥಿಗಳ ಸಂಘ ಬೆಂಗಳೂರು, ಹಳೆ ವಿದ್ಯಾರ್ಥಿಗಳ ಸಂಘ ಪುಣೆ ಹಾಗೂ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗಗಳು ಮತ್ತು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು
ಈ ಒಂದು ಕಾರ್ಯಕ್ರಮದಲ್ಲಿ ಸಂಜಯ್ ಗಾಂಧಿ ಮೆಮೋರಿಯಲ್ ಪಾಲಿಟೆಕ್ನಿಕ್ ನ ಹಳೆಯ ಎಲ್ಲಾ ವಿದ್ಯಾರ್ಥಿಗಳ ಒಕ್ಕೂಟ ಇವರ ಸಹಯೋಗದೊಂದಿಗೆ ಹಳೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಕ್ಯಾಲೆಂಡರ್ ಬಿಡುಗಡೆ ಮಾಡಿ ಐಡಿ ಕಾರ್ಡನ್ನು ವಿದ್ಯಾರ್ಥಿಗಳಿಗೆ ನೀಡಿ ಮತ್ತು ವಿದ್ಯಾರ್ಥಿಗಳಿಗೆ ಶಿವಮೊಗ್ಗದ ಜೆ ಎನ್ಎನ್‌ಸಿ ಈ ಕಾಲೇಜಿನ ಪ್ರಾಂಶುಪಾಲರಿಂದ ಮಾರ್ಗದರ್ಶನವನ್ನು ನೀಡಲಾಯಿತು.



