ಶಿವಮೊಗ್ಗ | ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ ಮೌಂಟ್ ಕಾರ್ಮೆಲ್ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಶಿವಮೊಗ್ಗ

ಶಿವಮೊಗ್ಗ,ಇತ್ತೀಚಿಗೆ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಜನವರಿ 11ರಂದು ನಡೆದ 3ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ ಯಶಸ್ವಿಯಾಗಿ ನಡೆಯಿತು.

ಈ ಪಂದ್ಯಾವಳಿಯಲ್ಲಿ ಶಿವಮೊಗ್ಗ ಜಿಲ್ಲೆಯ, ವಿದ್ಯಾ ನಗರದ ಮೌಂಟ್ ಕಾರ್ಮೆಲ್ ಸ್ಕೂಲ್ ನ ವಿದ್ಯಾರ್ಥಿಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿ ಉತ್ತಮ ಸಾಧನೆಯನ್ನು ಮೆರೆದಿದ್ದಾರೆ.

ಶಾಲೆಯ ವಿದ್ಯಾರ್ಥಿಗಳು ಕಟಾ ಮತ್ತು ಕುಮಿಟೆ ವಿಭಾಗಗಳಲ್ಲಿ ಸ್ಪರ್ಧಿಸಿ 09 ಬಂಗಾರದ ಪದಕಗಳು, 07 ಬೆಳ್ಳಿ ಪದಕಗಳು ಹಾಗೂ 14 ಕಂಚಿನ ಪದಕಗಳನ್ನು ಗಳಿಸಿದ್ದು, ಪ್ರಶಸ್ತಿ ಪತ್ರವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಈ ಅತ್ಯುತ್ತಮ ಸಾಧನೆಗಾಗಿ ಶಾಲೆಯ ಪ್ರಾಂಶುಪಾಲರಾದ Rev.Fr.ಸುರೇಶ್ ಸಲ್ಡಾನ್ಹಾ, ಮ್ಯಾನೇಜರ್ Rev.Fr. ಸುನಿಲ್ ರಾಡ್ರಿಗಸ್, ಹಾಗೂ ಕರಾಟೆ ಮಾಸ್ಟರ್ ಅದ ಸನ್ ಸೈ ಸಾದಿಕ್, ಶಿಕ್ಷಕ ವೃಂದ ಹಾಗೂ ಪೋಷಕರು ವಿದ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ವಿದ್ಯಾರ್ಥಿಗಳ ಶಿಸ್ತು, ಪರಿಶ್ರಮ ಮತ್ತು ಸಾಧನೆಯನ್ನು ಶ್ಲಾಘಿಸಿ ಅಭಿನಂದನೆಗಳನ್ನು ಸಲ್ಲಿಸಿದರು.

Author