ಚಿಕ್ಕಮಗಳೂರು | ಬಿಇಒ ಮಾತಿನಿಂದ ಅವಮಾನ ; ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಚಿಕ್ಕಮಗಳೂರು

ಚಿಕ್ಕಮಗಳೂರು,ಜಿಲ್ಲೆಯ ಕಡೂರು ತಾಲೂಕಿನ ಯಳ್ಳಂಬಳಸೆ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಅವರ ಮಾತುಗಳಿಂದ ಮನನೊಂದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.

ಮೃತ ವಿದ್ಯಾರ್ಥಿನಿ 10ನೇ ತರಗತಿಯ ಎರಡನೇ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಕೇವಲ 500ಕ್ಕೆ 93 ಅಂಕಗಳನ್ನು ಪಡೆದಿದ್ದಾಳೆ ಎನ್ನಲಾಗಿದೆ. ಇದನ್ನು ನೆಪ ಮಾಡಿಕೊಂಡು, ಬಿಇಒ ಅವರು ವಿದ್ಯಾರ್ಥಿನಿಯ ಮನೆಗೆ ತೆರಳಿ ಆಕೆಯನ್ನು ಗದರಿಸಿ, “ಇಷ್ಟು ಕಡಿಮೆ ಮಾರ್ಕ್ಸ್ ತೆಗೆದುಕೊಂಡು ನೀನು ಪಾಸ್ ಆಗ್ತೀಯಾ?” ಎಂದು ಅವಮಾನಿಸಿದರೆಂದು ಕುಟುಂಬಸ್ಥರು ಹಾಗೂ ಸ್ಥಳೀಯರು ಆರೋಪಿಸಿದ್ದಾರೆ.

ಬಿಇಒ ಮನೆಗೆ ಬಂದ ಬಳಿಕ ಮಂಕಾದ ವಿದ್ಯಾರ್ಥಿನಿ ಬಿಇಒ ಮನೆಗೆ ಬಂದು ‘ಬುದ್ಧಿ ಹೇಳಿ’ ಹೋದ ನಂತರದಿಂದ ವಿದ್ಯಾರ್ಥಿನಿ ತೀವ್ರವಾಗಿ ಮಂಕಾಗಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಈಗಾಗಲೇ ಪರೀಕ್ಷೆಯಲ್ಲಿ ಫೇಲ್ ಆಗಿರುವ ಒತ್ತಡದ ಜೊತೆಗೆ, ಮೂರನೇ ಪೂರ್ವ ಸಿದ್ಧತಾ ಪರೀಕ್ಷೆಯಲ್ಲೂ ಫೇಲ್ ಆಗಿಬಿಡುವೆನೋ ಎಂಬ ಭಯ ಆಕೆಯನ್ನು ಮಾನಸಿಕವಾಗಿ ಕುಗ್ಗಿಸಿದೆ ಎನ್ನಲಾಗಿದೆ.

Author