ಶಿವಮೊಗ್ಗ, ಜನ ಶಿಕ್ಷಣ ಸಂಸ್ಥೆ ಮತ್ತು ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಶಿಕಾರಿಪುರ ಇವರ ಸಹಯೋಗದಲ್ಲಿ ಹಮ್ಮಿಕೊಂಡ ವಿವಿಧ ವೃತ್ತಿಕೌಶಲ್ಯ ತರಬೇತಿಗಳ ಸಮಾರೋಪ ಸಮಾರಂಭ ಮತ್ತು ಯಶಸ್ವೀ ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಣೆಯನ್ನು ಶಿಕಾರಿಪುರದಲ್ಲಿ ಹಮ್ಮಿಕೊಳ್ಳಲಾಯಿತು.
ದೀಪ ಹಚ್ಚುವುದರ ಮೂಲಕ ಸಮಾರಂಭದ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೆರವೇರಿಸಿದರು. ಶಿವಮೊಗ್ಗ ಜಿಲ್ಲೆಯಾದ್ಯಂತ ಪ್ರತಿಯೊಬ್ಬ ಮಹಿಳೆಯರು ಜನ ಶಿಕ್ಷಣ ಸಂಸ್ಥೆಯು ನೀಡುತ್ತಿರುವ ವೃತ್ತಿಕೌಶಲ್ಯ ತರಬೇತಿಗಳನ್ನು ಪಡೆದು ಸ್ವಾಭಿಮಾನಿ ಜೀವನ ನಡೆಸುತ್ತಿರುವುದು ಶ್ಲಾಘನೀಯ.
ನಮ್ಮಲ್ಲಿ ಯಾವುದೇ ಜಾತಿ ಭೇದ-ಭಾವ ಇಲ್ಲದೆ ದೇಶದ ಆರ್ಥಿಕ ಅಭಿವೃದ್ಧಿಗೆ ಒಟ್ಟಾಗಿ ಶಕ್ತಿಯನ್ನು ತುಂಬುವ ಕೆಲಸವನ್ನು ಮಾಡುತ್ತಿದ್ದೇವೆ ಎಂದರು. ಸಂಸದ ಬಿ.ವೈ.ರಾಘವೇಂದ್ರ ಯಶಸ್ವೀ ಫಲಾನುಭವಿಗಳಿಗೆ ಪ್ರಮಾಣಪತ್ರವನ್ನು ವಿತರಿಸಿ, ಮಹಿಳೆಯರು ದೇಶದ ಅಭಿವೃದ್ಧಿಯಲ್ಲಿ ಪ್ರಧಾನಮಂತ್ರಿಗಳ ವಿಕಸಿತ ಭಾರತದ ಕನಸನ್ನು ನನಸು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದರು.
ಜನ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಎಸ್.ವೈ.ಅರುಣಾದೇವಿ, ಗುರುಮೂರ್ತಿ, ರಾಮಣ್ಣ ಹಾಗೂ ಪ್ರರ್ತಕರ್ತ ಸಂಘದ ತಾಲ್ಲೂಕು ಅಧ್ಯಕ್ಷ ನವೀನ್ ಮೊದಲಾದವರು ಉಪಸ್ಥಿತರಿದ್ದರು



