ಶಿವಮೊಗ್ಗ,ವ್ಯಾಪಾರ ಸುಲಭೀಕರಿಸಲು, ಯೂನಿಯನ್ ಮುಕ್ತ ವಾತಾವರಣ ನಿರ್ಮಿಸಲಿಕ್ಕಾಗಿ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ 4 ಕಾರ್ಮಿಕ ಸಂಹಿತೆಗಳನ್ನು ಜಾರಿ ಮಾಡಿರುವುದು ಕೇವಲ ಆರ್ಥಿಕ ದಾಳಿ ಮಾತ್ರವಲ್ಲದೆ ರಾಜಕೀಯ ದಾಳಿಯೂ ಆಗಿದೆ ಎಂದಿರುವ ಕಾರ್ಮಿಕ ಸಂಘಟನೆಗಳ ಜಂಟೀ ಸಮಿತಿ ಫೆ. 12ರಂದು ಈ ನೀತಿ ವಿರುದ್ಧ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ರಾಜ್ಯ ರೈತ ಸಂಘದ ಅಧ್ಯಕ್ಷ ಎಚ್ ಆರ್ ಬಸವರಾಜಪ್ಪ, ಕಾರ್ಖಾನೆಗಳ ವ್ಯಾಖ್ಯಾನದಲ್ಲಿ ಕಾರ್ಮಿಕರ ಮಿತಿ ಹೆಚ್ಚಳದಿಂದ ಗುತ್ತಿಗೆ ಕಾರ್ಮಿಕರ ಲೈಸನ್ಸ್‌ಗಳಿಗೆ ಕಾರ್ಮಿಕರ ಮಿತಿ ಹೆಚ್ಚಳದಿಂದಾಗಿ 90% ಕಾರ್ಮಿಕರಿಗೆ ವೇತನ ESI, PF, ಗ್ರಾಚ್ಯುಟಿ & ಬೋನಸ್ ಹಕ್ಕುಗಳಿಂದ ಹೊರಗುಳಿಯುತ್ತಾರೆ.
ಜೀವನೋಪಾಯ ವೇತನದ ಜಾರಿಯ ಪ್ರಸ್ತಾಪವಿಲ್ಲ ಕನಿಷ್ಟ ವೇತನ ಅಥವಾ ರಾಷ್ಟ್ರೀಯ ಸರಾಸರಿ ವೇತನದ ಖಾತ್ರಿಯ ಬದಲಿಗೆ ತಳಹಂತದ 178ರೂ. ಕೂಲಿಯನ್ನು ಹೊಸದಾಗಿ ಪರಿಷ್ಕರಿಸಲಾಗಿದೆ. ಇನ್ನೂ ಯಾವುದೇ ವಲಯದ ವೇತನಗಳ ಹೆಚ್ಚಳಕ್ಕೆ ಆಧಾರವಿಲ್ಲದಂತೆ ಮಾಡಲಾಗಿದೆ. ಈಗಾಗಲೇ ಮಾಲೀಕರ ಹೆಚ್ಚುವರಿ ಮೌಲ್ಯ 23.39% ರಿಂದ 51.01% ಗೆ ಹೆಚ್ಚಳವಾಗಿದೆ. ಕಾರ್ಮಿಕರ ವೇತನದ ಪಾಲು 30.27% ರಿಂದ 15.97% ಗೆ ಇಳಿದಿದೆ. ಕಾರ್ಮಿಕರಿಂದ ಪ್ರಾಥಮಿಕವಾಗಿ ಸಂಘ ರಚಿಸಿಕೊಳ್ಳುವ ಹಕ್ಕುಗಳನ್ನು ನಿರ್ಬಂಧಿಸಲಾಗಿದೆ ಎಂದರು.
4 ಲೇಬರ್ ಕೋಡ್ ರದ್ದುಗೊಳಿಸಿ. ನರೇಗಾ ಯೋಜನೆಯನ್ನು ಪುನರ್ ಸ್ಥಾಪಿಸಿ, ವಿ.ಜಿ ಗ್ರಾಮ್ ಜಿ ಕಾಯ್ದೆ ರದ್ದುಗೊಳಿಸಿ. •
ಭೂ ಸ್ವಾಧೀನ ಕಾಯ್ದೆಯನ್ನು ಹಿಂಪಡೆಯಬೇಕು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ಭೂಸುಧಾರಣಾ, ಎ.ಪಿ.ಎಂ.ಸಿ, ಜಾನುವಾರು ಸಂರ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು.ವಿದ್ಯುತ್‌ಚ್ಛಕ್ತಿ ಖಾಸಗೀಕರಣ ಮಾಡಬಾರದು.ವಿಮಾ ತಿದ್ದುಪಡಿ ಕಾಯ್ದೆ, ಶಾಂತಿ ಕಾಯ್ದೆ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ಸಂಹಿತೆಗಳಿಗೆ ಈಗ ತಂದಿರುವ ಗೆಜೆಟ್ ನೋಟೀಫಿಕೇಷನ್‌ನ್ನು ವಾಪಸ್ಸು ಪಡೆಯಬೇಕು. ಮತ್ತು ಒಕ್ಕೂಟ ಸರ್ಕಾರ ತಂದಿರುವ ಜನವಿರೋಧಿ ಮಸೂದೆಗಳನ್ನು ವಿರೋಧಿಸಸಬೇಕು.
2025 ಆಗಸ್ಟ್ ತಿಂಗಳಲ್ಲಿ ಕನಿಷ್ಟ ವೇತನ ಹೆಚ್ಚಳದ ಕುರಿತು ಕನಿಷ್ಟ ವೇತನಾ ಸಲಹಾ ಮಂಡಳಿ ನೀಡಿರುವ ಶಿಫಾರಸ್ಸನ್ನು ಅಂತಿಮ ಅಧಿಸೂಚನೆಯಾಗಿ ಹೊರಡಿಸಬೇಕು.
ಕೇಂದ್ರ ಸರ್ಕಾರ ತರುತ್ತಿರುವ ದುಡಿಯುವ ಜನರ ವಿರೋಧಿಯಾದ ನೀತಿಗಳನ್ನು ಕರ್ನಾಟಕದಲ್ಲಿ ಜಾರಿಗೊಳಿಸುವುದಿಲ್ಲ ಎಂಬ ಸ್ಪಷ್ಟ ಘೋಷಣೆ ಮಾಡಬೇಕು ಎಂದರು.
ಬಂಡವಾಳಗಾರರ ಸಂಪತ್ತನ್ನು ರಕ್ಷಿಸಲುಈ ರೀತಿಯಾಗಿ ಬಂಡವಾಳಗಾರರ ಹಿತಕಾಯಲು ಮತ್ತು ಟೊಂಕ ಕಟ್ಟಿ ಒತ್ತಾಯಿಸಿದರೂ ಕೂಡರಾಜ್ಯ ಸರ್ಕಾರ ಈ ಕೋಡ್‌ಗಳಿಗೆ ನಿಯಮಾವಳಿ ರಚಿಸಬಾರದೆಂದೂ ಸಂಘಟನೆಗಳ ಬಳಿ ಕನಿಷ್ಟ ಚರ್ಚೆ ಮಾಡುವ ಸೌಜನ್ಯವನ್ನು ತೋರಿಸದೆ 4ಕೋಡ್‌ಗಳಿಗೆ ಗೆಜೆಟ್ ನೋಟಿಫಿಕೇಷನ್ ಕಾರ್ಮಿಕರು ಉಸಿರೆತ್ತದಂತಹ ಪರಿಸ್ಥಿತಿಯನ್ನು ನಿರ್ಮಿಸುತ್ತಿದೆ.
2025 ಆಗಸ್ಟ್ ತಿಂಗಳಲ್ಲಿ ಕನಿಷ್ಠ ವೇತನದ ಮಂಡಳಿಯ ಶಿಫಾರಸ್ಸಾದ ಕನಿಷ್ಟ ವೇತನವನ್ನು ಈಗ 1948ರ ಕನಿಷ್ಠ ವೇತನ ಕಾಯ್ದೆ ರದ್ದಾದ ಹಿನ್ನಲೆಯನ್ನು ಕಾನೂನು ಇಲಾಖೆ ಅಭಿಪ್ರಾಯ ಪಡೆಯುವುದಾಗಿ ಹಿಂಬರಹ ಕೊಡುವ ಮುಖಾಂತರ ರಾಜ್ಯದ ಅಧಿಕಾರವನ್ನು ಕಾರ್ಮಿಕರ ಹಿತಾಸಕ್ತಿ ಕಾಪಾಡಲು ಬಳಸುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದರು.
ಫೆ. 12ರಂದು ಕಾರ್ಮಿಕರು ಉತ್ಪಾದನೆ ಸ್ಥಗಿತಗೊಳಿಸಿ, ರೈತರು ಕೃಷಿ ಕೂಲಿ ಕಾರ್ಮಿಕರು ತಮ್ಮ ಕಾರ್ಯಚಟುವಟಿಕೆ ನಿಲ್ಲಿಸಿ ಬಂದ್ ಗೆ ಸಹಕರಿಸಬೇಕೆಂದು ಮನವಿ ಮಾಡಿದರು.



