ಶಿವಮೊಗ್ಗ | ಎಸ್‌ಸಿ /ಎಸ್‌ಟಿ ಅನುದಾನ ವರ್ಗಾವಣೆ ವಿರೋಧಿಸಿ ; ದಲಿತ ಸಂಘರ್ಷ ಸಮಿತ ಎಂ. ಗುರುಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ

ಶಿವಮೊಗ್ಗ

ಶಿವಮೊಗ್ಗ,ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನಾ ಧರಣಿ ನಡೆಯಿತು. 2026–27ರ ರಾಜ್ಯ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಶೇ. 24.1 ರಷ್ಟು ಅನುದಾನ ಮೀಸಲಿರಿಸಬೇಕು ಹಾಗೂ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯ ಸೆಕ್ಷನ್ 7(ಅ) ರದ್ದುಪಡಿಸಬೇಕು ಎಂದು ಒತ್ತಾಯಿಸಲಾಯಿತು.

ಪ್ರತಿಭಟನಾಕಾರರು ಆರೋಪಿಸಿದಂತೆ, ಎಸ್‌ಸಿ/ಎಸ್‌ಟಿ ಕಲ್ಯಾಣಕ್ಕಾಗಿ ಮೀಸಲಾದ ಸುಮಾರು 42,000 ಕೋಟಿ ರೂಗಳಲ್ಲಿ 25,000 ಕೋಟಿ ರೂಗಳನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸುವ ಮೂಲಕ ಸರ್ಕಾರ ಸಾಮಾಜಿಕ ನ್ಯಾಯದ ವಿರುದ್ಧ ನಡೆದುಕೊಂಡಿದೆ.

ಕಾಯ್ದೆಯ ಪ್ರಕಾರ ಎಸ್‌ಸಿ ಸಮುದಾಯಕ್ಕೆ ಶೇ. 17.15 ಮತ್ತು ಎಸ್‌ಟಿ ಸಮುದಾಯಕ್ಕೆ ಶೇ. 6.95 ಅನುದಾನ ವ್ಯಯಿಸಬೇಕೆಂದು ಅವರು ತಿಳಿಸಿದರು.ಇದರ ಜೊತೆಗೆ ಅರಣ್ಯಾಧಾರಿತ ಆದಿವಾಸಿ ಕುಟುಂಬಗಳಿಗೆ ವಸತಿ ಸೌಲಭ್ಯ, ಆರ್ಥಿಕ ಸಂಕಷ್ಟದಲ್ಲಿರುವ ಬಡ ಕುಟುಂಬಗಳಿಗೆ ಮಾಸಿಕ 5,000 ರೂ ನೆರವು, ವೈದ್ಯಕೀಯ ನಿರ್ಲಕ್ಷ್ಯ ಪ್ರಕರಣದಲ್ಲಿ ಕ್ರಮ, ಬಗರ್ ಹುಕುಂ ಸಾಗುವಳಿದಾರರಿಗೆ ಭೂಹಕ್ಕು ಪತ್ರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಲಾಯಿತು.

ರಾಜ್ಯ ಸಂಚಾಲಕ ಎಂ. ಗುರುಮೂರ್ತಿ, ಜಿಲ್ಲಾ ಸಂಚಾಲಕ ಎಂ. ಏಳುಕೋಟಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದರು.

Author