ಶಿವಮೊಗ್ಗ | ಬೆಸ್ಕಾಂ ಎಇಇ ನಿವಾಸ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗ

ಶಿವಮೊಗ್ಗ ಬೆಸ್ಕಾಂ ಎಇಇ ಅರ್ಜುನ್ ಆರ್. ಎಚ್. ಅವರ ನಿವಾಸ ಮತ್ತು ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿಯಾಗಿದೆ.

ಬೆಸ್ಕಾಂನಲ್ಲಿ ಸಿವಿಲ್ ವಿಭಾಗದ ಅರ್ಜುನ್ ಆರ್. ಎಚ್ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್, ಇನ್ಸ್ಪೆಕ್ಟರ್ ಗಳಾದ ಪ್ರಭು ಸೋರೆನ್, ಗುರುರಾಜ್ ಮೈಲಾರಿ ನೇತೃತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆಸಿದ್ದಾರೆ.

ಶಿವಮೊಗ್ಗದ ವಿಜಯನಗರ ಮತ್ತು ಗೋಪಾಲಗೌಡ ಬಡಾವಣೆಯಲ್ಲಿರುವ ನಿವಾಸಗಳ ಮೇಲೆ ಹಾಗೂ ಸಾಗರದ ಆನಂದಪುರ ಸಮೀಪದ ತಳಲೆ ಗ್ರಾಮದಲ್ಲಿರುವ 2.5 ಎಕರೆ ಮತ್ತು 4.5 ಎಕರೆ ಜಮೀನಿನ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸುವ ಮೂಲಕ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಮುಂದುವರೆದು ದಾವಣಗೆರೆಯ ನಿಟ್ಟುವಳ್ಳಿಯಲ್ಲಿ ಬಾಡಿಗೆ ರೂಮ್ ಮಾಡಿಕೊಂಡಿದ್ದ ಅರ್ಜುನ್ ಅವರ ಮನೆ ಹಾಗೂ ಕಚೇರಿ ಮೇಲೆ ಕೂಡ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Author