ಶಿವಮೊಗ್ಗ | ರಾಜ್ಯ ಸರ್ಕಾರದ ವಿರುದ್ದ ಬಂಜಾರ ಸಂಘದಿಂದ ಕೈಗೆ ಕಪ್ಪು ಪಟ್ಟಿ ಧರಿಸಿ ಭಾರಿ ಪ್ರತಿಭಟನೆ

ಶಿವಮೊಗ್ಗ

ಶಿವಮೊಗ್ಗ ನಗರದಲ್ಲಿಂದು ರಾಜ್ಯ ಸರ್ಕಾರದ ವಿರುದ್ದ ಬಂಜಾರ ಸಂಘ ಕೈಗೆ ಕಪ್ಪು ಪಟ್ಟಿ ಧರಿಸುವ ಮೂಲಕ ಭಾರಿ ಪ್ರತಿಭಟನೆ ನಡೆಸಿದೆ.

ಒಳ ಮೀಸಲಾತಿಯಲ್ಲಿ ಬಂಜಾರ ಸಮುದಾಯಕ್ಕೆ ರಾಜ್ಯ ಸರ್ಕಾರ ಮೋಸ ಮಾಡಿದೆ, ಮರಣ ಶಾಸನ ಬರೆದಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಬಂಜಾರ ಕನ್ವೆನ್ಷನ್ ಹಾಲ್ ನಿಂದ ಕುವೆಂಪು ರಂಗಮಂದಿರವರೆಗೂ ಪ್ರತಿಭಟನೆ ನಡೆಸಿ ನಂತರ ಕುವೆಂಪು ರಂಗಮಂದಿರಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ಯತ್ನಿಸಿದ್ದಾರೆ.

ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುವೆಂಪು ರಂಗಮಂದಿರದಲ್ಲಿ ಸೇವಾಲಾಲ್ ಜಯಂತಿ ನಡೆಯುತ್ತಿದ್ದ ಹಿನ್ನಲೆಯಲ್ಲಿ ಪ್ರತಿಭಟನಕಾರರು ಮುತ್ತಿಗೆ ಹಾಕಲು ಯತ್ನಿಸಿದ್ದು ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಕಾರರನ್ನು ವಶಕ್ಕೆ ಪಡೆದಿದ್ದಾರೆ.

Author