ಫೆ. 28ಕ್ಕೆ “ಸುವರ್ಣ ಸಂಭ್ರಮ” ಹಾಗೂ “ರಾಜ್ಯ ಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ” ; ಶಿಕ್ಷಣ ಸಚಿವರಿಗೆ ಅಹ್ವಾನ

ಬೆಂಗಳೂರು

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ (ರಿ.) ವತಿಯಿಂದ ಫೆಬ್ರವರಿ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ “ಸುವರ್ಣ ಸಂಭ್ರಮ” ಹಾಗೂ “ರಾಜ್ಯ ಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ”.

ಕಾರ್ಯಕ್ರಮಕ್ಕೆ ಆಗಮಿಸುವಂತೆ ಸಂಘದ ಪದಾಧಿಕಾರಿಗಳ ನಿಯೋಗವು ಇಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್, ಮಧು ಬಂಗಾರಪ್ಪನವರನ್ನು ಭೇಟಿ ಮಾಡಿ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಿದರು.

ಈ ವೇಳೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಚಂದ್ರಶೇಖರ್ ನುಗ್ಲಿ, ರಾಜ್ಯ ಉಪಾಧ್ಯಕ್ಷರಾದ ಶ್ರೀ ಮಾರುತೇಶ ಆರ್, ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀ ಜಯಕುಮಾರ್ ಹೆಬ್ಬಳ್ಳಿ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಮೇಶ್ ಗೋಣಿ ಹಾಜರಿದ್ದರು.

Author