ಶಿವಮೊಗ್ಗದ ಭದ್ರಾವತಿಯ ಹೊಸ ಸಿದ್ದಾಪುರದಲ್ಲಿ ಗೃಹಿಣಿ ಸ್ವಾತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಮಾಹಿತಿ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತ ಸ್ವಾತಿ ಅವರ ತಾಯಿ ಈಗಾಗಲೇ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ಹೇಳಿದರು.
ದೂರಿನಲ್ಲಿ ಮಾಳೂರು ಪೊಲೀಸ್ ಠಾಣೆಯ ಕ್ರೈಂ ಹೆಡ್ ಕಾನ್ಸ್ಟೇಬಲ್ ಮೋಹನ್ ಅವರ ಹೆಸರನ್ನು ಉಲ್ಲೇಖಿಸಲಾಗಿದೆ.
ಪತಿ ಜಗದೀಶ್ ಸಾವಿನ ಬಳಿಕ ಮೋಹನ್ ಅವರು ಸ್ವಾತಿ ವಿರುದ್ಧ ಇಲ್ಲಸಲ್ಲದ ಅಪಪ್ರಚಾರ ನಡೆಸಿ ಮಾನಸಿಕ ಕಿರುಕುಳ ನೀಡಿದ್ದರೆಂದು ಕುಟುಂಬವು ಆರೋಪಿಸಿದೆ.
“ಪ್ರಕರಣದ ಸತ್ಯಾಸತ್ಯತೆಗಳನ್ನು ಹೊರತರುವ ಸಲುವಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಮೃತರ ಕುಟುಂಬ ನೀಡಿದ ದೂರಿನನ್ವಯ ಕಾನೂನು ಕ್ರಮ ಜರುಗಿಸಲಾಗುತ್ತದೆ,” ಎಂದು ಎಸ್ಪಿ ತಿಳಿಸಿದ್ದಾರೆ.



