ಶಿವಮೊಗ್ಗ | ಜಿಲ್ಲೆಯಾದ್ಯಂತ ಪೊಲೀಸರಿಂದ ವಿಶೇಷ ನೈಟ್ ರೌಂಡ್ಸ್ ; ವಾಹನಗಳ ತಪಾಸಣೆ

ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಾದ್ಯಂತ ಸಾರ್ವಜನಿಕ ಸುರಕ್ಷತೆ ಬಲಪಡಿಸುವ ಉದ್ದೇಶದಿಂದ ಪೊಲೀಸರು ವಿಶೇಷ ನೈಟ್ ರೌಂಡ್ಸ್ ನಡೆಸಿದರು. ನಗರದಲ್ಲಿ ಪೊಲೀಸ್ ಅಧಿಕಾರಿಗಳಿಗೆ ಬ್ರಿಫಿಂಗ್ ಸಭೆ ನಡೆಸಿದ ಎಸ್ಪಿ ನಿಖಿಲ್, ರೌಂಡ್ಸ್ ವೇಳೆ ಪಾಲಿಸಬೇಕಾದ ಕರ್ತವ್ಯಗಳ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿದರು.

ಈ ವಿಶೇಷ ಕಾರ್ಯಾಚರಣೆಯ ಭಾಗವಾಗಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಿ ವಾಹನಗಳ ತಪಾಸಣೆ ನಡೆಸಲಾಯಿತು.

ಸ್ಲೀಪರ್ಕೋ ಚ್ ಬಸ್‌ಗಳಲ್ಲಿ ಎಮರ್ಜೆನ್ಸಿ ಎಕ್ಸಿಟ್ ಡೋರ್‌ಗಳ ಕಾರ್ಯಕ್ಷಮತೆಯನ್ನೂ ಪರಿಶೀಲಿಸಲಾಯಿತು.ರಾತ್ರಿ ವೇಳೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಅಪರಾಧ ತಡೆಗಟ್ಟಲು ಪೊಲೀಸರು ಕಟ್ಟು ನಿಟ್ಟಿನ ಕ್ರಮ ಕೈಗೊಂಡಿರುವುದು ಗಮನಾರ್ಹವಾಗಿದೆ.

Author