ಹಾಸನ | ಹೆಲ್ಮೆಟ್ ಧರಿಸದೆ ಬುಲೆಟ್ ನಲ್ಲಿ ಜಾಲಿ ರೈಡ್ ; ಅಪಘಾತದಲ್ಲಿ ಯುವತಿ ದುರ್ಮರಣ

ಹಾಸನ

ಹಾಸನ, ಚಲಾಯಿಸುತ್ತಿದ್ದ ಬುಲೆಟ್ ಬೈಕ್‌ನಿಂದ ಬಿದ್ದು ಯುವತಿಯೋರ್ವಳು ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಇದೇ ಬೈಕ್‌ನಲ್ಲಿದ್ದ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ.ಸತ್ಯಮಂಗಲ ಬಡಾವಣೆಯ ಪ್ರಿಯಾ (23) ಮೃತ ಯುವತಿ. ಗಾಯಾಳು ಸ್ವಾತಿಯನ್ನು (24) ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ರಸ್ತೆಯಲ್ಲಿದ್ದ ಹಂಪ್ ಕಾಣದ ಹಿನ್ನೆಲೆ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಪ್ರಕರಣ ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

Author