ಶಿವಮೊಗ್ಗ | ಕೋಟೆ ಮಾರಿಕಾಂಬ ದೇವಿಯ ಜಾತ್ರೆ ; ಎಸ್ಪಿ ನಿಖಿಲ್ ರಿಂದ ಭದ್ರತಾ ವ್ಯವಸ್ಥೆ ಪರಿಶೀಲನೆ

ಶಿವಮೊಗ್ಗ

ಶಿವಮೊಗ್ಗ ನಗರದ ಕೋಟೆ ಮಾರಿಕಾಂಬ ದೇವಸ್ಥಾನ ಜಾತ್ರೆ ಹಿನ್ನೆಲೆಯಲ್ಲಿ ಭಕ್ತರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕೈಗೊಳ್ಳಲಾದ ಮುಂಜಾಗ್ರತಾ ಕ್ರಮಗಳು ಮತ್ತು ಬಂದೋಬಸ್ತ್ ವ್ಯವಸ್ಥೆಯನ್ನು ಹಿರಿಯ ಅಧಿಕಾರಿಗಳು ಪರಿಶೀಲಿಸಿದರು.

ನಿನ್ನೆ ಬೆಳಗ್ಗೆ ಗಾಂಧಿ ಬಜಾರ್ ಪ್ರದೇಶಕ್ಕೆ ಭೇಟಿ ನೀಡಿದ ಅಧಿಕಾರಿಗಳು, ಭದ್ರತಾ ವ್ಯವಸ್ಥೆ, ಜನಸಂದಣಿ ನಿಯಂತ್ರಣ ಹಾಗೂ ಸಂಚಾರ ವ್ಯವಸ್ಥೆಗಳ ಬಗ್ಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.ಈ ವೇಳೆ ದರ್ಶನಕ್ಕೆ ಸಾಲಿನಲ್ಲಿ ನಿಂತಿದ್ದ ಸಾರ್ವಜನಿಕರೊಂದಿಗೆ ಸಂವಹನ ನಡೆಸಿ, ವ್ಯವಸ್ಥೆಗಳ ಬಗ್ಗೆ ಅಭಿಪ್ರಾಯಗಳನ್ನು ತಿಳಿದುಕೊಂಡರು.

ಜಾತ್ರೆ ಅವಧಿಯಲ್ಲಿ ಭಕ್ತರಿಗೆ ಸುಗಮ ಹಾಗೂ ಸುರಕ್ಷಿತ ದರ್ಶನ ವ್ಯವಸ್ಥೆ ಒದಗಿಸಲು ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಸಮಗ್ರ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶ್ರೀ ಸತ್ಯನಾರಾಯಣ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Author