ಶಿವಮೊಗ್ಗ ನಗರದ ತುಂಗಾನಗರದ ಸಮೀಪದ ನ್ಯಾಮತ್ ಶಾದಿ ಮಹಲ್ ಬಳಿ 80 ಅಡಿ ರಸ್ತೆಯಲ್ಲಿ ಹಳೆ ದ್ವೇಷದ ಹಿನ್ನೆಲೆ ನಾಲ್ವರು ದುಷ್ಕರ್ಮಿಗಳು ಏಕಾಂಗಿಯಾಗಿ ತೆರಳುತ್ತಿದ್ದ ಯುವಕನ ಮೇಲೆ ಮಚ್ಚಿನಿಂದ ತಲೆಗೆ ಮರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಡಿಯೋ ಮತ್ತು ಯಮಹಾ ಆರ್‌ಎಕ್ಸ್ ಬೈಕ್‌ಗಳಲ್ಲಿ ಬಂದ ಆರೋಪಿಗಳು ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಗಂಭೀರವಾಗಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆಯ ಸಂಬಂಧ ತುಂಗಾನಗರ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ.
ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.



