ಶಿವಮೊಗ್ಗ | ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ : ಶಾಸಕ ಎಸ್.ಎನ್. ಚನ್ನಬಸಪ್ಪ

ಶಿವಮೊಗ್ಗ

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಆಚಾರ್ಯ ತುಳಸಿ ವಾಣಿಜ್ಯ ಕಾಲೇಜುದಲ್ಲಿ ಆಯೋಜಿಸಲಾದ ಬೃಹತ್ ಉದ್ಯೋಗ ಮೇಳವನ್ನು ಶಾಸಕ ಎಸ್.ಎನ್. ಚನ್ನಬಸಪ್ಪ ಉದ್ಘಾಟಿಸಿದರು.

ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವಜನತೆಗೆ ಕೇವಲ ಪದವಿ ಮಾತ್ರವಲ್ಲ, ಉದ್ಯೋಗ ಕೌಶಲ್ಯವೂ ಅತ್ಯಗತ್ಯವೆಂದು ಹೇಳಿದರು.

ಜಿಲ್ಲೆಯ ಅಭ್ಯರ್ಥಿಗಳಿಗೆ ಅವರ ಶೈಕ್ಷಣಿಕ ಅರ್ಹತೆಗೆ ತಕ್ಕಂತೆ ಸೂಕ್ತ ಉದ್ಯೋಗ ದೊರಕುವಂತೆ ಮಾಡುವಲ್ಲಿ ಇಂತಹ ಮೇಳಗಳು ಪ್ರಮುಖ ಪಾತ್ರವಹಿಸುತ್ತವೆ. ಕಂಪನಿಗಳು ಮತ್ತು ಉದ್ಯೋಗಾಕಾಂಕ್ಷಿಗಳ ನಡುವೆ ಈ ಮೇಳವು ಪರಿಣಾಮಕಾರಿ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಕಾಲೇಜಿನ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

Author