ಭದ್ರಾವತಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ವಾರ್ಷಿಕ ವೇತನ ಬಡ್ತಿ ಹಾಗೂ ಇತರೆ ಸರ್ಕಾ ಭತ್ಯೆಗಳನ್ನು ಮಂಜೂರು ಮಾಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಖೆಡ್ಡಕ್ಕೆ ಬಿದ್ದಿದ್ದಾರೆ.
ಈ ಪ್ರಕರಣದಲ್ಲಿ ಬಿಇಒ ಅವರಮಧ್ಯವರ್ತಿಯಾಗಿದ್ದ ಖಾಸಗಿ ವ್ಯಕ್ತಿ ಮಂಜುನಾಥನನ್ನೂ ಲೋಕಾಯುಕ್ತರ ಟೀಮ್ ಬಂಧಿಸಿದೆ.
ಲಿಂಗರಾಜು ಎಂಬ ಶಿಕ್ಷಕರು 2011ರಿಂದ 2023ರವರೆಗೆ ತಮ್ಮ ಇಲಾಖೆಯಿಂದ ಬರಬೇಕಾದ ವಾರ್ಷಿಕ ವೇತನ ಬಡ್ತಿಗಳು ಹಾಗೂ ಇತರೆ ಭತ್ಯೆಗಳನ್ನು ಮಂಜೂರು ಮಾಡುವಂತೆ ಹಲವು ಬಾರಿ ಭದ್ರಾವತಿ ತಾಲ್ಲೂಕು ಬಿಇಒ ಹಾಗೂ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು ಜೋತೆಗೆ ಕಛೇರಿಗೆ ಅಲೆದಲೆದು ಸುಸ್ತಾಗಿ ಹೋಗಿದ್ದರು.ಕೆಲಸ ಮಾತ್ರ ಆಗಿರಲಿಲ್ಲ ಇತ್ತೀಚೆಗೆ ಬಿಇಒ ನಾಗೇಂದ್ರಪ್ಪ ಮತ್ತು ಮಧ್ಯವರ್ತಿ ಮಂಜುನಾಥ್ ಇಬ್ಬರೂ ಸೇರಿಕೊಂಡು ಎಲ್ಲಾ ಆರ್ಥಿಕ ಸೌಲಭ್ಯಗಳನ್ನು ಮಾಡಿಕೊಡುವುದಕ್ಕೆ 4 ಲಕ್ಷ ರೂಪಾಯಿ ಲಂಚ ಹಣಕ್ಕೆ ಬೇಡಿಕೆ ಇಟ್ಟಿದ್ದರೆ ಎನ್ನಲಾಗಿದೆ.
ಈ ಕುರಿತು ಮಾ. 02,ರಂದು ಲೋಕಾಯುಕ್ತರ ಕಛೇರಿಗೆ ತೆರಳಿ ದೂರು ದಾಖಲಿಸಿದ್ದರು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988 (ತಿದ್ದುಪಡಿ-2018)ರ ಕಲಂ 7(ಎ) ಅಡಿಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು. ಮಾ,3 ರ ಸಂಜೆ ಸುಮಾರು 7 ಗಂಟೆ ವೇಳೆಗೆ ಭದ್ರಾವತಿ ಬಿಇಒ ಕಚೇರಿಯ ಕೊಠಡಿಯಲ್ಲಿ, ಲಿಂಗರಾಜು ಅವರಿಂದ 1 ಲಕ್ಷ ರೂ. ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಹಣವನ್ನು ಜಪ್ತಿಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಆರೋಪಿತರಾದ ನಾಗೇಂದ್ರಪ್ಪ ಎ.ಕೆ. ಮತ್ತು ಮಧ್ಯವರ್ತಿ ಮಂಜುನಾಥರನ್ನು ತನಿಖೆ ಸಂಬಂಧ ವಶಕ್ಕೆ ಪಡೆಯಲಾಗಿದೆ.



