ಶಿವಮೊಗ್ಗ ಜಿಲ್ಲೆಯಲ್ಲಿ ಹೋಳಿ ಹಬ್ಬದ ಉತ್ಸಾಹ ಜೋರಾಗಿದೆ. ಒಂದೊಂದು ದಿನ ಒಂದೊಂದು ಕಡೆ ಆಯಾ ಸಂಪ್ರದಾಯದ ಪ್ರಕಾರ ಹೋಳಿ ಆಚರಿಸುವ ಶಿವಮೊಗ್ಗದಲ್ಲಿ ಪೊಲೀಸ್ ಇಲಾಖೆ ಪರೋಡಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಚ್ಚರಿಕೆಯನ್ನು ಸಹ ನೀಡಿದೆ.
ಈ ನಿಟ್ಟಿನಲ್ಲಿ ಹಬ್ಬ ಅಥವಾ ಯಾವುದೇ ಆಚರಣೆಗಳ ನೆಪದಲ್ಲಿ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುವ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.
ಹೋಳಿ ಹಬ್ಬದ ಸಂಭ್ರಮ ಸಂಭ್ರಮದ ನಡುವೆ ಹೆಣ್ಣುಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ.
ಹಬ್ಬದ ಸಂಭ್ರಮಾಚರಣೆಯ ನೆಪದಲ್ಲಿ ಬಣ್ಣ ಎರಚುವಾಗ ಅಥವಾ ಗುಂಪುಗಳಲ್ಲಿ ಸೇರುವಾಗ ಮಹಿಳೆಯರ ಅನುಮತಿ ಇಲ್ಲದೆ ಅವರೊಂದಿಗೆ ಅನುಚಿತವಾಗಿ ವರ್ತಿಸುವುದು, ಕಿಡಿಗೇಡಿತನ ತೋರುವುದು ಅಥವಾ ಮಹಿಳೆಯರಿಗೆ ಮುಜುಗರ ಉಂಟುಮಾಡುವುದು ಕಾನೂನುಬಾಹಿರ ಅಪರಾಧವಾಗಿದೆ.
ಇಂತಹ ಕೃತ್ಯಗಳಲ್ಲಿ ಭಾಗಿಯಾಗುವ ವ್ಯಕ್ತಿಗಳ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಡಲಿದೆ ಪೊಲೀಸ್ ಇಲಾಖೆಯ ಸೂಚನೆಗಳುಮಹಿಳೆಯರ ತೇಜೋವಧೆ ಮಾಡುವ ಅಥವಾ ಅವರ ಘನತೆಗೆ ಚ್ಯುತಿ ತರುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023 ರ ಸೆಕ್ಷನ್ 79 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು.
ಈ ಕಾಯ್ದೆಯನ್ವಯ ಆರೋಪ ಸಾಬೀತಾದರೆ ಅಪರಾಧಿಗೆ 3 ವರ್ಷಗಳವರೆಗೆ ಕಾರಾಗೃಹ ಶಿಕ್ಷೆ ಮತ್ತು ದಂಡವನ್ನು ವಿಧಿಸಲಾಗುತ್ತದೆ.
ಸಾರ್ವಜನಿಕರು ಹಬ್ಬಗಳನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸಬೇಕು, ಹೆಣ್ಣುಮಕ್ಕಳ ರಕ್ಷಣೆಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು.
ಯಾರಾದರೂ ಅಸಭ್ಯವಾಗಿ ವರ್ತಿಸಿದರೆ ತಕ್ಷಣವೇ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಶಿವಮೊಗ್ಗ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ



