ಶಿವಮೊಗ್ಗ | ಮಾರಕಾಸ್ತ್ರ ಹಿಡಿದು ಸಂಚರಿಸುತ್ತಿದ್ದ ಇಬ್ಬರು ಸೆರೆ

ಶಿವಮೊಗ್ಗ

ಶಿವಮೊಗ್ಗ, ವಿನೋಬನಗರ ಪೊಲೀಸ್ ಸ್ಟೇಷನ್​ ಬಳಿಯ ವಿಕಾಸ ಸ್ಕೂಲ್​ ಬಳಿ ಮಾರಕಾಸ್ತ್ರಗಳೊಂದಿಗೆ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರು ಯುವಕರನ್ನು ವಿನೋಬನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇಬ್ಬರು ಯುವಕರು ಬೈಕ್‌ನಲ್ಲಿ ಆಯುಧ ಇಟ್ಟುಕೊಂಡು ಓಡಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಜನರೇ ಮಾಹಿತಿ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಪೊಲೀಸರು ಹುಡುಕಾಟ ಆರಂಭಿಸಿದ್ದರು.ನಂತರ ಬೈಕ್​ನಲ್ಲಿ ಎರಡು ಮಚ್ಚು ಇಟ್ಟುಕೊಂಡು ಓಡಾಡುತ್ತಿದ್ದ ಇಬ್ಬರನ್ನು ಬಂಧನ ಮಾಡಿದ್ದಾರೆ.

ವಿಚಾರಣೆ ವೇಳೆ ಆರೋಪಿಗಳು ಸಮರ್ಪಕ ಉತ್ತರ ನೀಡಿಲ್ಲ. ಹೀಗಾಗಿ ಆರ್ಮ್ಸ್​ ಆಕ್ಟ್​ ಅಡಿಯಲ್ಲಿ ಕೇಸ್ ದಾಖಲಿಸಿ, ಇಬ್ಬರನ್ನು ಬಂಧನಕ್ಕೆ ಒಳಪಡಿಸಿದ್ದರು. ಈ ಬಗ್ಗೆ ತನಿಖೆ ಮುಂದುವರಿದಿದೆ.

Author