ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಗಳಾದ ನಾಜಿಮಾ ಹಾಗೂ ವೈ. ತಿಮ್ಮರಾಜು ಅವರು ಅಸ್ಮಾ ಬಾನು ಎಂಬುವವರಿಗೆ ಗುತ್ತಿಗೆ ಆಧಾರದಲ್ಲಿ ಕೆಲಸ ಕೊಡಿಸುವುದಾಗಿ 3 ಲಕ್ಷ ಹಣ ಪಡೆದು ಪಕ್ಷದ ಹೆಸರು, ಜಿಲ್ಲಾ ಉಸ್ತುವಾರಿ ಸಚಿವರ ಹೆಸರು ಹಾಗೂ ವಿಧಾನ ಪರಿಷತ್‌ನ ಸದಸ್ಯರ ಹೆಸರನ್ನು ದುರುಪಯೋಗ ಪಡೆಸಿಕೊಂಡಿಡ ಹಿನ್ನೆಲೆಯಲ್ಲಿ ಇವರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದರಿಂದ ಪಕ್ಷಕ್ಕೆ ಮುಜುಗರವಾಗಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ, ನಾಜಿಮಾ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿದ್ದರು.

ನಾಜಿಮಾ ಹಾಗೂ ವೈ. ತಿಮ್ಮರಾಜು ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಜಿಲ್ಲಾ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಆದೇಶ ಹೊರಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲೆ ಆಕ್ರೋಶ ವ್ಯಕ್ತಪಡಿಸಿದ ಹಲವರು, ನಾಜಿಮ ಹಾಗೂ ತಿಮ್ಮರಾಜು ವಿರುದ್ದ ಉಚ್ಚಾಟನೆ ಮಾಡಲೇಬೇಕು ಇವರುಗಳ ಮೇಲೆ ಹಲವಾರು ಆರೋಪಗಳಿವೆ ಹಾಗಾಗಿ ಪಕ್ಷಕ್ಕೆ ಧಕ್ಕೆ ಆಗಲು ಇನ್ನು ಮುಂದೆ ಬಿಡಬಾರದು ಎಂದು ತಿಳಿಸಿದ್ದರು ಎಂದು ತಿಳಿದುಬಂದಿದೆ.
ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್. ಪ್ರಸನ್ನ ಕುಮಾರ್ ಪಕ್ಷದಿಂದ 6 ವರ್ಷ ಕಾಲ ಉಚ್ಚಾಟಿಸಿದ್ದಾರೆ ಎಂಬ ಮಾಹಿತಿಯಾಗಿದೆ.
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ವೇತ ಬಂಡಿ ಪ್ರತಿಕ್ರಿಯೆ
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ವೇತ ಬಂಡಿ ಅವರು,ನಮ್ಮ ಇ-ಕನ್ನಡ ಸುದ್ದಿ ಮಾಧ್ಯಮಕ್ಕೆ ಮೊದಲ ಪ್ರತಿಕ್ರಿಯೆ ನೀಡಿದ್ದು, ಪಕ್ಷದಲ್ಲಿ ಯಾರು ಕೂಡ ಇನ್ನು ಮುಂದೆ ಪಕ್ಷಕ್ಕೆ ಮುಜುಗರ ಉಂಟಾಗುವಂತೆ ಕೆಲಸ ಮಾಡಬಾರದು ಎಂಬುದು ನಮ್ಮ ಉದ್ದೇಶವಾಗಿದೆ ಎಂದರು.
ಹಾಗಾಯೇ ಯಾವದೇ ರೀತಿಯ ವಂಚನೆ, ಅಶಿಸ್ತು ಆದಲ್ಲಿ ಅಂತವರ ಮೇಲೆ ಪಕ್ಷ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಎಂಬುದು ಈ ಮುಖೇಣ ನಮ್ಮ ಸಂದೇಶವಾಗಿದೆ ಎಂದರು .

ಹಾಗೂ ನಾಜಿಮ ಅವರನ್ನು ಉಚ್ಚಾಟನೆ ಮಾಡಿರುವುದು ನನ್ನ ವೈಯಕ್ತಿಕ ಅಭಿಪ್ರಾಯವಲ್ಲ ನಮ್ಮ ಪಕ್ಷದ ಮಹಿಳಾ ಘಟಕದ ಎಲ್ಲ ಮುಖಂಡರ ಅಭಿಪ್ರಾಯವು ಶಿಸ್ತಿನ ಕ್ರಮ ಜರುಗಿಸಬೇಕು ಎಂಬುದಾಗಿತ್ತು, ಹಾಗಾಗಿ ಈ ಸಂಬಂಧ ಪಕ್ಷದಿಂದ ಉಚ್ಚಾಟನೆ ಮಾಡುವಂತೆ ಜಿಲ್ಲಾಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್ ಅವರಿಗೆ ಪತ್ರ ಬರೆದಿದ್ದೆ ಎಂದು ತಿಳಿಸಿದ್ದಾರೆ.
ಇನ್ನು ಈ ಒಂದು ಘಟನೆ ಸಂಬಂಧ ನಿಮ್ಮ ಇ-ಕನ್ನಡ ಮಾಧ್ಯಮದ ಮುಖೇಣ ನಮ್ಮ ಗಮನಕ್ಕೆ ಘಟನೆಯ ಸಂಪೂರ್ಣ ಮಾಹಿತಿ ನೀಡಿದಕ್ಕೆ ಧನ್ಯವಾದಗಳು ಎಂದು ತಿಳಿಸಿದರು.

ನಮ್ಮ ಪಕ್ಷ, ನಮ್ಮವರು ಅಂತೆಲ್ಲ ತಪ್ಪು ಮಾಡಿ ಪಕ್ಷಕ್ಕೆ ಮುಜುಗರ ಉಂಟು ಮಾಡುವವರನ್ನು ಹಾಗೂ ಅವರ ತಪ್ಪನ್ನು ಮರೆಮಾಚುವ ಪ್ರಮೇಯವೇ ಇಲ್ಲ, ಯಾರೇ ತಪ್ಪು ಮಾಡಿದರು ನಮ್ಮ ಪಕ್ಷದಿಂದ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಹಾಗೂ ನೊಂದಿರುವ ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮ ಆಶಯವಾಗಿದೆ ಎಂದು ಇ-ಕನ್ನಡ ಮಾಧ್ಯಮಕ್ಕೆ ತಿಳಿಸಿದರು.



