ಶಿವಮೊಗ್ಗ, ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ಸೃಷ್ಟಿಸಿ ವ್ಯಕ್ತಿಯೊಬ್ಬರ ಖಾಸಗಿ ವಿಡಿಯೋ ಅಪ್‌ಲೋಡ್ ಮಾಡಿದ್ದ ಆರೋಪದ ಮೇಲೆ ಇಬ್ಬರನ್ನು ಶಿವಮೊಗ್ಗ ಕ್ರೈಂ ಪೊಲೀಸರು ಬಂದಿಸಿದ್ದಾರೆ.
ಫೆಬ್ರವರಿ 5, 2026 ರಂದು ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊಬ್ಬರು ತನ್ನ ಖಾಸಗಿ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಅಪಲೋಡ್ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದರು, ಈ ಹಿನ್ನೆಲೆ ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗಾಗಿ ತಂಡ ರಚಿಸಿ ಕಾರ್ಯಾಚರಣೆ ಕೈಗೊಂಡಿದ್ದರು.
ಪೊಲೀಸ್ ತಂಡವು ತಾಂತ್ರಿಕ ದಾಖಲೆಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ ಹೊಸನಗರ ನಿವಾಸಿ ಮಹಿಳೆ ಹಾಗೂ ಬೆಂಗಳೂರಿನ ನಿವಾಸಿ ಯುವಕನೊಬ್ಬನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.



