ಬೆಂಗಳೂರು,ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರನ್ನು ಇಂದು ಬೆಂಗಳೂರಿನ ಐಟಿಸಿ ಗಾರ್ಡೇನಿಯಾ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪನವರು ಭೇಟಿ ಮಾಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಚಿವರುಗಳಾದ ಎನ್.ಎಸ್ ಬೋಸರಾಜು, ಪ್ರಿಯಾಂಕ್ ಖರ್ಗೆ ಹಾಗೂ ಶಾಸಕರಾದ ಗೋಪಾಲಕೃಷ್ಣ ಬೇಳೂರು ಹಾಜರಿದ್ದರು.



