ಬಾನು ಮುಷ್ತಾಕ್ ರಿಂದ ಅಂಬೇಡ್ಕರ್ ಭಾವಚಿತ್ರಕ್ಕೆ ಚಪ್ಪಲಿ ಧರಿಸಿ ಪುಷ್ಪನಮನ ಸಲ್ಲಿಸಿ ಅವಮಾನ ; ಭಾರಿ ಆಕ್ರೋಶ

ಬೆಂಗಳೂರು

ಬೆಂಗಳೂರು, ಬೂಕ‌ರ್ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಾನು ಮುಷ್ತಾಕ್ ಅವರು ಕಾರ್ಯಕ್ರಮವೊಂದರಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆ‌ರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಚಪ್ಪಲಿ ಧರಿಸಿಕೊಂಡೇ ಪುಷ್ಪನಮನ ಸಲ್ಲಿಸಿದ್ದು ವಿವಾದಕ್ಕೆ ಕಾರಣವಾಗಿದೆ.

ನಗರದ ಅಂಬೇಡ್ಕ‌ರ್ ಭವನದಲ್ಲಿ, ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ಎಂ.ಬಿ. ಶ್ರೀನಿವಾಸ್ ಪ್ರತಿಷ್ಠಾಪನದ ವತಿಯಿಂದ ‘ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಜನಜಾಗೃತಿ ಸಮಾವೇಶ’ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಾನು ಮುಷ್ತಾಕ್ಅವರು ಅಂಬೇಡ್ಕ‌ರ್ ಅವರ ಭಾವಚಿತ್ರಕ್ಕೆ ಚಪ್ಪಲಿ ಧರಿಸಿಕೊಂಡೇ ಪುಷ್ಪನಮನ ಸಲ್ಲಿಸಿದರು.

ಈ ವೇಳೆ ಅವರು ಚಪ್ಪಲಿ ಧರಿಸಿರುವುದನ್ನು ಗಮನಿಸಿದ ಕಾರ್ಯಕ್ರಮದ ಸಂಘಟಕರು, ಚಪ್ಪಲಿ ತೆಗೆದು ಪುಷ್ಪನಮನ ಸಲ್ಲಿಸುವಂತೆ ಮನವಿ ಮಾಡಿದರು. ಆದರೆ ಬಾನು ಮುಷ್ತಾಕ್ ಅವರು ಅದಕ್ಕೆ ಒಪ್ಪದೇ, ಚಪ್ಪಲಿ ಧರಿಸಿಕೊಂಡೇ ನಮನ ಸಲ್ಲಿಸಿದರು.

ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, “ಚಪ್ಪಲಿ ಹೊಲಿಯುವುದು ನಮ್ಮ ವೃತ್ತಿ. ಅದು ನಮ್ಮ ಮನೆ ದೇವರು. ಅದು ನಮ್ಮ ಅಸ್ಮಿತೆಯ ಸಂಕೇತ. ನಾವು ಚಪ್ಪಲಿ ಹೊಲಿಯುವವರು. ಅದಕ್ಕೆ ನಮಗೆ ಅಪಾರ ಗೌರವ ಇದೆ. ಆದ್ದರಿಂದ ನಾನು ಚಪ್ಪಲಿ ಬಿಚ್ಚುವುದಿಲ್ಲ” ಎಂದು ತಿಳಿಸಿದ್ದಾರೆ.

ಅವರ ಈ ಹೇಳಿಕೆ ಇದೀಗ ಸಾರ್ವಜನಿಕ ವಲಯದಲ್ಲಿ ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.

ಈ ಘಟನೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳು ಹಾಗೂ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ ಹುಟ್ಟುಹಾಕಿದೆ.

Author