ದಾವಣಗೆರೆ ದಕ್ಷಿಣ ಶ್ರೀನಿವಾಸ ದಾಸ ಕರಿಯಪ್ಪ, ಬಾಗಲಕೋಟೆ ವೀರಣ್ಣ ಚರಂತಿಮಠ ; ಉಪಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳ ಘೋಷಣೆ

ದಾವಣಗೆರೆ

ಬೆಂಗಳೂರು, ಎರಡು ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.‌ ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿಯಾಗಿ ಶ್ರೀನಿವಾಸ ದಾಸ ಕರಿಯಪ್ಪ ಹಾಗೂ ಬಾಗಲಕೋಟೆ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ್ ಹೆಸರನ್ನು ಪ್ರಕಟಿಸಿದೆ.

ಏ.9ರಂದು ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಒಚುನಾವಣೆ ನಡೆಯಲಿದೆ. ಹಾಲಿ ಶಾಸಕರ ನಿಧನದಿಂದ ತೆರವಾಗಿರುವ ಈ ಎರಡು ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿಯಾಗಿ ಶ್ರೀನಿವಾಸ ದಾಸ ಕರಿಯಪ್ಪ ಹಾಗೂ ಬಾಗಲಕೋಟೆ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ್ ಹೆಸರನ್ನು ಘೋಷಿಸಿದೆ.

ಅಚ್ಚರಿ ತೀರ್ಮಾನ ಎಂಬಂತೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಎಸ್‌ಟಿ ಸಮುದಾಯದ ಶ್ರೀನಿವಾಸ ದಾಸ ಕರಿಯಪ್ಪ ಟಿಕೆಟ್ ನೀಡುವ ಮೂಲಕ ಬಿಜೆಪಿ ಹೈ ಕಮಾಂಡ್ ಅಚ್ಚರಿ ನಿರ್ಧಾರ ಕೈಗೊಂಡಿದೆ. ಕುರುಬ ಸಮುದಾಯದ ಜಿ.ಬಿ.ವಿನಯ್ ಕುಮಾರ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಲವಾದ ಮಾತುಗಳು ಕೇಳಿ ಬರುತ್ತಿತ್ತು.

2024 ರ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು ಪ್ರಯತ್ನಿಸಿ ವಿಫಲರಾದ ವಿನಯ್, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ 42,907 ಮತಗಳನ್ನು ಗಳಿಸಿದ್ದರು.

ಆದರೆ, ಅಚ್ಚರಿ ಎಂಬಂತೆ ಬಿಜೆಪಿ ಹೈ ಕಮಾಂಡ್ ಸ್ಥಳೀಯ ಬಣ ರಾಜಕೀಯ ಮಧ್ಯೆ ಎಸ್ ಟಿ ಸಮುದಾಯದ ಶ್ರೀನಿವಾಸ ದಾಸ ಕರಿಯಪ್ಪರಿಗೆ ಮಣೆ ಹಾಕಿದೆ.‌ದಾವಣಗೆರೆ ಜಿಲ್ಲೆಯ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಸ್ಥಳೀಯ ಮುಖಂಡ ಅಜಯ್ ಕುಮಾರ್, ರಾಜೇನಹಳ್ಳಿ ಶಿವಕುಮಾರ್ ಸೇರಿದಂತೆ ಹಲವರು ಟಿಕೆಟ್ ರೇಸ್‌ನಲ್ಲಿದ್ದರು.

ಆದರೆ, ಕೊನೆಯದಾಗಿ ಶ್ರೀನಿವಾಸ್ ದಾಸ ಕರಿಯಪ್ಪ ಟಿಕೆಟ್ ನೀಡಲಾಗಿದೆ. ದಾವಣಗೆರೆ ಕ್ಣೇತ್ರದಲ್ಲಿ ಸಿದ್ದೇಶ್ವರ ಬಣದ ಶ್ರೀನಿವಾಸ್ ದಾಸ ಕರಿಯಪ್ಪಗೆ ಟಿಕೆಟ್ ನೀಡಿರುವುದು ಅಚ್ಚರಿ ಮೂಡಿಸಿದೆ.

ದಾವಣೆಗರೆಯಲ್ಲಿ ಪ್ರಬಲ ಲಿಂಗಾಯತ, ಮರಾಠ ಸಮುದಾಯ ಬಿಟ್ಟು ಎಸ್.ಟಿ ಸಮುದಾಯಕ್ಕೆ ಟಿಕೆಟ್ ಘೋಷಣೆ ಮಾಡಿರುವುದು ಕುತೂಹಲ ಕೆರಳಿಸಿದೆ.‌

Author