ಶಿವಮೊಗ್ಗ ತ್ಯಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ನೀರಾನೆ ದಾಳಿಯಿಂದ ಯುವ ಪಶುವೈದ್ಯ ಡಾ. ಸಮೀಕ್ಷಾ ರೆಡ್ಡಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ ದುಃಖ ವ್ಯಕ್ತಪಡಿಸಿದ್ದಾರೆ.
ತಮ್ಮ ವೃತ್ತಿ ಬದುಕನ್ನು ವನ್ಯಜೀವಿಗಳ ಸೇವೆಗೆ ಮುಡಿಪಾಗಿಟ್ಟ ಯುವ ವೈದ್ಯಯನ್ನು ಕಳೆದುಕೊಂಡಿರುವುದು ಕೇವಲ ಅವರ ಕುಟುಂಬ ಮತ್ತು ಇಲಾಖೆಗೆ ನಷ್ಟವಲ್ಲದೆ ಇಡೀ ಸಮಾಜಕ್ಕೆ ಆದ ನಷ್ಟವೆಂದು ತಿಳಿಸಿದ್ದಾರೆ.
ಇಂತಹ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ಸರ್ಕಾರ ನಿಲ್ಲಲಿದ್ದು, ಈಗಾಗಲೇ ಅರಣ್ಯ ಸಚಿವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.
ಈ ಸಂದರ್ಭದಲ್ಲಿ ದೇವರು ಅವರ ಅಗಲಿಕೆಯನ್ನು ಭರಿಸುವ ಶಕ್ತಿ ಕುಟುಂಬ ವರ್ಗಕ್ಕೆ ಹಾಗೂ ಅವರ ಸಹಪಾಠಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್, ಮಧು ಬಂಗಾರಪ್ಪ ಸಂತಾಪ ಸೂಚಿಸಿದ್ದಾರೆ.



