ಶಿವಮೊಗ್ಗ,ವಿದ್ಯಾರ್ಥಿನಿಯರೊಡನೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ಕೊಡುತ್ತಿರುವ ಉಪನ್ಯಾಸಕ ‘ಪ್ರೊ.ಮುದುಕಪ್ಪ’ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಇಂದು ನಗರ NSUI ವತಿಯಿಂದ ನಗರಾಧ್ಯಕ್ಷ ಕೀರ್ತಿ ಗಣೇಶ್ ನೇತೃತ್ವದಲ್ಲಿ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು
ಇನ್ನು ಘಟನೆ ಸಂಬಂಧ ವಿದ್ಯಾರ್ಥಿನಿಯರಿಗೆ ಆಂತರಿಕ ಪರೀಕ್ಷೆಯಲ್ಲಿ ಅಂಕ ಕೊಡಬೇಕಾದರೆ ಲೈಂಗಿಕವಾಗಿ ಸಹಕರಿಸಬೇಕೆಂದು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಸಹ್ಯಾದ್ರಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಮುದುಕಪ್ಪ ವಿರುದ್ಧ ಕಠಿಣ ಕ್ರಮ ಕೈಗೊಂಡು, ಅವರನ್ನು ಕೆಲಸದಿಂದ ವಜಾಗೊಳಿಸಬೇಕೆಂದು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಆಗ್ರಹಿಸುತ್ತಿದೆ ಎಂದು ತಿಳಿಸಿದ್ದಾರೆ .

ತನ್ನ ಲೈಂಗಿಕ ಬಯಕೆಗಳನ್ನು ತೀರಿಸಿಕೊಳ್ಳಲು ಉಪನ್ಯಾಸಕನಾಗಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕಾಗಿದ್ದ ಪ್ರೊ. ಮುದುಕಪ್ಪ, ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದು.
ಈ ಬಗ್ಗೆ ನೊಂದ ವಿದ್ಯಾರ್ಥಿನಿಯರು ಕಾಲೇಜು ಪ್ರಾಂಶುಪಾಲರಿಗೆ ದೂರು ನೀಡಿದರು ಯಾವುದೇ ಕ್ರಮ ಕೈಗೊಳ್ಳದೆ ನೆಪ ಮಾತ್ರಕ್ಕೆ ತಿಳುವಳಿಕೆ ಪತ್ರವನ್ನು ನೀಡಿ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿರುವುದನ್ನು ಎನ್.ಎಸ್.ಯು.ಐ. ಸಹಿಸುವುದಿಲ್ಲ.
ಅನೇಕ ಮಹನೀಯರುಗಳು ಕಲಿತು, ಕಲಿಸಿದ ಸಹ್ಯಾದ್ರಿ ಕಾಲೇಜಿನಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಹಿತಕರ ಘಟನೆಗಳು ಪದೇ ಪದೇ ಮರುಕಳಿಸುತ್ತಿವೆ. ನೊಂದ ವಿದ್ಯಾರ್ಥಿನಿಯರು ದೂರು ಕೊಟ್ಟರೂ ಪ್ರಾಂಶುಪಾಲರು ಕ್ರಮ ಕೈಗೊಂಡಿಲ್ಲ.
ನಂತರ ಎನ್.ಎಸ್.ಯು.ಐ. ಕುಲಸಚಿವರನ್ನು ಸಂಪರ್ಕಿಸಿ ಘಟನೆಯ ವಿವರಗಳನ್ನು ನೀಡಲಾಗಿತ್ತು. ಆಗ ಕುಲಸಚಿವರು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು.
ಆದರೆ, ಇದುವರೆಗೂ ಉಪನ್ಯಾಸಕ ಪ್ರೊ. ಮುದುಕಪ್ಪ ವಿರುದ್ಧ ಕ್ರಮ ಕೈಗೊಳ್ಳದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪ್ರಕರಣವನ್ನು ಮುಚ್ಚಿಹಾಕುವ ಹುನ್ನಾರ ನಡೆಯುತ್ತಿದೆ.ಕೂಡಲೇ ಕುಲಪತಿಗಳು ಈ ಕಾಮುಕ ಉಪನ್ಯಾಸಕ ಪ್ರೊ. ಮುದುಕಪ್ಪನನ್ನು ಕೆಲಸದಿಂದ ವಜಾಗೊಳಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು.

ಇಲ್ಲವಾದಲ್ಲಿ ಎನ್.ಎಸ್.ಯು.ಐ. ವಿವಿ ಬಂದ್ ನಂತಹ ತೀವ್ರ ಪ್ರತಿಭಟನೆ ನಡೆಸಲಾಗುವುದು, ಹಾಗೂ ಪ್ರಾಧ್ಯಪಕನಿಗೆ ಮಸಿ ಬಳಿಯುತ್ತೇವೆ ಎಂದು ಈ ಮೂಲಕ ಎಚ್ಚರಿಸುತ್ತಿದ್ದೇವೆ ಎಂದು ತಿಳಿಸಿದರು. ಹಾಗೂ ಮನವಿಯನ್ನು ಸಹ್ಯಾದ್ರಿ ಕಾಲೇಜಿನ ಪ್ರಾಂಶುಪಾಲರಿಗೆ ನೀಡಿದರು.
ಈ ಒಂದು ಪ್ರತಿಭಟನೆಯಲ್ಲಿ NSUI ಮುಖಂಡರಾದ ಮಧುಸೂದನ್, ವಿಜಯ್, ರವಿ, ಹಾಗೂ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.



