ಶಿವಮೊಗ್ಗ ನಗರದ ಎಂಟಿ ರಸ್ತೆಯ ಟೆಂಪಲ್ ಸ್ಟ್ರೀಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವೇಗವಾಗಿ ಸಂಚರಿಸುತ್ತಿದ್ದ ಬೈಕ್‌ಗಳು ನಿಯಂತ್ರಣ ತಪ್ಪಿ ಪರಸ್ಪರ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಸವಾರರು ಗಂಭೀರ ಗಾಯಗೊಂಡು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ.



