ಶಿವಮೊಗ್ಗ,ಕನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳು ಆದ ಡಿ.ಕೆ.ಶಿವಕುಮಾರ್ರವರ ಸೂಚನೆಯ ಮೇರೆಗೆ ಮಂಜುನಾಥ್.ಜಿ.ಡಿ ಅವರನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರರನ್ನಾಗಿ ಇಂದಿನಿಂದ ಜಾರಿಗೆ ಬರುವಂತೆ ನೇಮಿಸಲಾಗಿರುತ್ತದೆ ಎಂದು ರಮೇಶ್ ಬಾಬು ಅವರು ತಿಳಿಸಿದ್ದಾರೆ.

ಹಾಗೂ ಈ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ಸಿದ್ದಾಂತಗಳಿಗೆ ಅನುಗುಣವಾಗಿ ತಾವು ಪಕ್ಷದ ವಕ್ತಾರರಾಗಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಲು ಮತ್ತು ಪಕ್ಷದ ಸೂಚನೆಗಳಿಗೆ ಅನುಗುಣವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಈ ಮೂಲಕ ಕೋರಲಾಗಿದೆ ಎಂದು ತಿಳಿಸಲಾಗಿದೆ.



