ಸಾಗರದ ಗಾಂಧಿ ಮೈದಾನದಲ್ಲಿ ಬೃಹತ್ LED ಪರದೆಯಲ್ಲಿ ಆರ್ ಸಿ ಬಿ‌ ಪಂದ್ಯ ವೀಕ್ಷಣೆಗೆ ವ್ಯವಸ್ಥೆ ಮಾಡಿಸಿದ ಶಾಸಕ ಬೇಳೂರು

ಶಿವಮೊಗ್ಗ

ಸಾಗರ,ಮಾರ್ಚ್ 28ರಿಂದ ನಡೆಯಲಿರುವ ಆರ್ ಸಿ ಬಿ ತಂಡದ ಪ್ರತಿಯೊಂದು ಪಂದ್ಯವನ್ನು ಸಾಗರದ ಗಾಂಧಿ‌ ಮೈದಾನದಲ್ಲಿ ಬೃಹತ್ LED ಪರದೆಯ ಮೇಲೆ ನೇರ ಪ್ರಸಾರ ಮಾಡಲು ಸಕಲ ಸಿದ್ಧತೆಗಳನ್ನು ಮಾಡಲಾಗಿದೆ.

ಸಾಗರ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ವಿಶೇಷ ಆಸಕ್ತಿಯಿಂದ ಈ ವ್ಯವಸ್ಥೆ ಮಾಡಲಾಗಿದೆ.

ಇದರಿಂದ ಸಾಗರ ಹಾಗೂ ಸುತ್ತಮುತ್ತಲಿನ ಸಾವಿರಾರು RCB ಅಭಿಮಾನಿಗಳು ಒಂದೇ ಸ್ಥಳದಲ್ಲಿ ಸೇರಿ ತಮ್ಮ ನೆಚ್ಚಿನ ತಂಡದ ಪಂದ್ಯಗಳನ್ನು ದೊಡ್ಡ ಪರದೆಯಲ್ಲಿ ವೀಕ್ಷಿಸುವ ಅವಕಾಶ ಪಡೆಯಲಿದ್ದಾರೆ.

ಕ್ರಿಕೆಟ್ ಪ್ರೇಮಿಗಳಿಗೆ ಇದು ಹಬ್ಬದ ವಾತಾವರಣವನ್ನು ಸೃಷ್ಟಿಸಲಿದೆ.

Author