ತೀರ್ಥಹಳ್ಳಿ | ಆಗುಂಬೆ ಘಾಟಿಯಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ ; ಉಡುಪಿ ಸಂಚಾರ ಮಾರ್ಗ ಬಂದ್

ಶಿವಮೊಗ್ಗ

ತೀರ್ಥಹಳ್ಳಿ,ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದ ಪರಿಣಾಮ ವಾಹನ ಸಂಚಾರ ಬಂದ್ ಆಗಿದೆ.

ಇದರಿಂದ ತೀರ್ಥಹಳ್ಳಿ – ಉಡುಪಿ ಮಾರ್ಗವಾಗಿ ಹೋಗುತ್ತಿದ್ದ ವಾಹನಗಳು ಘಾಟಿಯ ಎರಡು ಕಡೆ ಟ್ರಾಫಿಕ್ ಜಾಮ್ ಆಗಿವೆ.ಮರ ಸಂಪೂರ್ಣ ರಸ್ತೆಗೆ ಬಿದ್ದಿರುವ ಪರಿಣಾಮ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.

ಸ್ಥಳಕ್ಕೆ ಯಾವುದೇ ಅಧಿಕಾರಿಗಳು ಇನ್ನೂ ಬಂದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಘಾಟ್ ನಲ್ಲಿ ಓಡಾಟ ನಡೆಸುತ್ತಿದ್ದ ಲಾರಿ ಚಾಲಕರು ಮರ ತೆರವಿಗೆ ಪ್ರಯತ್ನ ಪಡುತ್ತಿದ್ದು ದೊಡ್ಡ ಮರ ಆಗಿರುವುದರಿಂದ ಮರ ತೆರವಿನ ಕಾರ್ಯ ಅಷ್ಟು ಸುಲಭ ಅಲ್ಲ ಎಂದು ಹೇಳಲಾಗುತ್ತಿದೆ.

ಸದ್ಯದ ಮಾಹಿತಿ ಪ್ರಕಾರ ಕೆಲವು ತಾಸು ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಬಹುದು ಎನ್ನಲಾಗುತ್ತಿದೆ.

Author