ಶಿವಮೊಗ್ಗ,ಮುಖ್ಯ ವಾಹಿನಿಗೆ ಮಹಿಳೆಯರು ಬರಬೇಕು ಮತ್ತು ಸಾಮಾಜಿಕ ಕ್ಷೇತ್ರಕ್ಕೆ ತಮ್ಮದೇ ಆದಾ ಕೊಡುಗೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಹಾಗೂ ಡಿ ಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ. ಶ್ರೀಕಾಂತ್ ಅವರು ಕರೆ ನೀಡಿದರು.
ಅವರಿಂದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮಹಿಳೆಯರಿಗೆ ರಾಜಕೀಯ ಮೀಸಲಾತಿ ಕಲ್ಪಿಸಿ ಮಹಿಳೆಯರ ಏಳಿಗೆಗೆ ಶ್ರಮಿಸಿದ್ದಾರೆ, ಕಾಂಗ್ರೆಸ್ ಸರ್ಕಾರದಲ್ಲೂ ಮಹಿಳೆಯರಿಗೆ ಸೂಕ್ತ ಸ್ಥಾನಮಾನವನ್ನು ನೀಡಲಾಗಿದೆ. ಇದನ್ನು ಮಹಿಳೆಯರು ಸದುಪಯೋಗ ಪಡಿಸಬೇಕೆಂದು ಕರೆ ನೀಡಿದರು.
ಸುರಭಿ ಮಹಿಳಾ ಮಂಡಳಿ ನಿರ್ದೇಶಕರಾದ ರೇಖಾ ರವರು ಮಾತನಾಡಿ ಮಹಿಳೆಯರು ಸಾಮಾಜಿಕ ಜಾಲತಾಣವನ್ನು ಬಳಸುವಾಗ ಜಾಗೃತರಾಗಿರಬೇಕು, ತಮ್ಮ ವೈಯಕ್ತಿಕ ಫೋಟೋವನ್ನು ಶೇರ್ ಮಾಡುವಾಗ ಎಚ್ಚರಿಕೆ ವಹಿಸಬೇಕು ಇಲ್ಲದಿದ್ದರೆ ಅದು ದುರುಪಯೋಗವಾಗಿ ಮಹಿಳೆಯರ ಜೀವನಕ್ಕೆ ಕುತ್ತು ತರಬಹುದು ಎಂದು ಎಚ್ಚರಿಸಿದರು.
ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಆರ್ ಪ್ರಸನ್ನ ಕುಮಾರ್ ಉದ್ಘಾಟಿಸಿದರು, ಮಹಿಳಾ ಕಾಂಗ್ರೆಸ್, ಜಿಲ್ಲಾಧ್ಯಕ್ಷ ಶ್ವೇತಾ ಬಂಡಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕಲಗೋಡು ರತ್ನಾಕರ್, ಕುವೆಂಪು ವಿವಿ ಎನ್ ಎಸ್ ಎಸ್ ಸಂಯೋಜಕರಾದ ಡಾ. ಶುಭಮರವಂತೆ, ಪುಷ್ಪ ಶಿವಕುಮಾರ್, ವಿಜಯಲಕ್ಷ್ಮಿ ಪಾಟೀಲ್, ಸ್ಟೆಲ್ಲಾ ಮಾರ್ಟಿನ್, ಭಾರತಿ ರಾಮಕೃಷ್ಣ, ಕವಿತಾ, ಯಮುನಾ ರಂಗೇಗೌಡ, ನೇತ್ರಾವತಿ, ಸುವರ್ಣ ನಾಗರಾಜ್, ವೇದಾವತಿ, ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು


