ವೈದ್ಯರ ಮಗ ವೈದ್ಯ ಆಗ್ತಾನೆ, MLA ಮಗ MLA ಆಗೋದ್ರಲ್ಲಿ ತಪ್ಪೇನು? ; ಕುಟುಂಬ ರಾಜಕೀಯಕ್ಕೆ ಎಂ.ಬಿ.ಪಾಟೀಲ್ ಸಮರ್ಥನೆ

ರಾಜಕೀಯ

ಗದಗ, ಡಾಕ್ಟರ್ ಮಗ ಡಾಕ್ಟರ್ ಆಗ್ತಾನೆ, ಎಂಜಿನಿಯರ್ ಮಗ ಎಂಜಿನಿಯರ್ ಆಗ್ತಾನೆ, ಹಾಗಿದ್ದಾಗ MLA ಮಗ MLA ಆಗೋದ್ರಲ್ಲಿ ತಪ್ಪೇನು ಸಚಿವ ಎಂ.ಬಿ. ಪಾಟೀಲ್ ಅವರು ಗುರುವಾರ ಪ್ರಶ್ನಿಸಿದ್ದು, ಈ ಮೂಲಕ ಕುಟುಂಬ ರಾಜಕೀಯವನ್ನು ಸಮರ್ಥಿಸಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾಕ್ಟರ್ ಮಗ ಡಾಕ್ಟರ್ ಆಗ್ತಾನೆ, ಎಂಜಿನಿಯರ್ ಮಗ ಎಂಜಿನಿಯರ್ ಆಗ್ತಾನೆ, ಹಾಗಿದ್ದಾಗ MLA ಮಗ MLA ಆಗೋದ್ರಲ್ಲಿ ತಪ್ಪೇನು? ಇದರಲ್ಲಿ ತಪ್ಪೇನು ಇಲ್ಲ ಎಂದು ಹೇಳಿದರು.

ಇದೇ ವೇಳೆ ತಮ್ಮದೇ ಉದಾಹರಣೆ ನೀಡಿದ ಅವರು, ನಾನು ನನ್ನ ತಂದೆಯ ನಿಧನದ ಬಳಿಕ MLA ಆಗಿದ್ದೇನೆ. ಆದರೆ, ಟಿಕೆಟ್ ಸಿಕ್ಕ ಮೇಲೆ ನಮ್ಮ ಸಾಮರ್ಥ್ಯ ಮತ್ತು ಬಲವನ್ನು ತೋರಿಸಬೇಕಾಗುತ್ತದೆ ಎಂದು ಹೇಳಿದರು.

ಮೃತ ಶಾಸಕರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡುವುದು ಕಾಂಗ್ರೆಸ್ ಪಕ್ಷದ ಪರಂಪರೆಯಾಗಿದೆ. “ಇದರಲ್ಲೇನು ತಪ್ಪಿಲ್ಲ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಉತ್ತಮ ವಾತಾವರಣ ಇದೆ. ಹಿಂದಿನ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಗೆದ್ದಿದೆ. ಈ ಬಾರಿಯೂ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದಾವಣಗೆರೆಯಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿದೆ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಸಾದಿಕ್ ಪೈಲ್ವಾನ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಪಕ್ಷದ ಅಭ್ಯರ್ಥಿಗಾಗಿ ಜಮೀರ್ ಅಹ್ಮದ್ ಪ್ರಚಾರ ನಡೆಸಲಿದ್ದಾರೆ. ಅವರು ಶಾಮನೂರು ಕುಟುಂಬದ ಒಳ್ಳೆಯ ಸ್ನೇಹಿತರು” ಎಂದು ತಿಳಿಸಿದರು.

Author