ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳರು ಅಂಗಡಿಯೊಂದಕ್ಕೆ ನುಗ್ಗಿ ಸಿಲಿಂಡರ್ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.
ಏಪ್ರಿಲ್ 04 ರಂದು ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಡಿಯೊಂದರಲ್ಲಿ ರಾತ್ರಿ ವೇಳೆ ಗ್ಯಾಸ್ ಸಿಲಿಂಡರ್ ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ.
ಈ ಕುರಿತು ದೂರುದಾರರು ತಕ್ಷಣವೇ 112 ಪೊಲೀಸರಿಗೆ ಫೋನ್ ಮಾಡಿದ್ದಾರೆ. ದೂರು ಸ್ವೀಕರಿಸಿದ ಕೂಡಲೇ ಕಾರ್ಯಪ್ರವೃತ್ತರಾದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು, ದೂರುದಾರರಿಂದ ಮಾಹಿತಿ ಸಂಗ್ರಹಿಸಿ ತನಿಖೆ ಆರಂಭಿಸಿದ್ದಾರೆ.
ಪೊಲೀಸರು ಘಟನೆಯ ಸಂಪೂರ್ಣ ಮಾಹಿತಿಯನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದು, ದೂರು ದಾಖಲಿಸಲು ಸೂಚಿಸಿದ್ದಾರೆ.



