ಶಿವಮೊಗ್ಗ, ನಗರದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಕೆಲಸ ಮಾಡಿಕೊಂಡಿದ್ದ ಮಹಿಳೆ ಹೊಳೆಗೆಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಮುಡುಬ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ರನ್ಯಾ ಬೇಸಿಲ್ (30) ಎಂದು ಗುರುತಿಸಲಾಗಿದ್ದು ಎನ್.ಆರ್ ಪುರ ತಾಲೂಕಿನ ಮುತ್ತಿನಕೊಪ್ಪಮೂಲದವರಾಗಿದ್ದಾರೆ, ಮೃತ ರನ್ಯಾ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು.

ನಿತ್ಯ ಶಿವಮೊಗ್ಗಕ್ಕೆ ಓಡಾಡುತ್ತಿದ್ದ ರನ್ಯಾ ನಿನ್ನೆ ಸಂಜೆ ಕೆಲಸ ಮುಗಿಸಿ ಮನೆಗೆ ಬಂದಿದ್ದರು. ಮನೆಗೆ ಬಂದಿದ್ದ ರನ್ಯಾ ಮತ್ತೆ ಮುಡುಬ ಬಳಿ ಹೋಗಿ ಸೇತುವೆ ಮೇಲಿಂದ ಹೊಳೆಗೆ ಹಾರಿಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ಸಂಬಂಧಿಸಿದಂತೆ ನಿಖರವಾದ ಕಾರಣ ತಿಳಿದುಬಂದಿಲ್ಲ. 12 ವರ್ಷದ ಹಿಂದೆ ಮದುವೆಯಾಗಿದ್ದ ರನ್ಯಾಗೆ ಇಬ್ಬರು ಮಕ್ಕಳಿದ್ದು, ಪತಿ ಕಾಫಿ ಬೆಳೆಗಾರರಾಗಿದ್ದಾರೆ.
ಎನ್.ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ಮುಂದುವರೆದಿದೆ.


