ಬೆಂಗಳೂರು,ಪ್ರಸಕ್ತ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ- 1 ರ ಫಲಿತಾಂಶ ಏಪ್ರಿಲ್ 9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಗೊಂಡಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಫಲಿತಾಂಶ ಬಿಡುಗಡೆ ಮಾಡಿದ್ದು, ಅಧಿಕೃತ ವೆಬ್‌ಸೈಟ್: https://www.karresults.nic.in/ ಆ್ಯಪ್: ಕರ್ನಾಟಕ ಒನ್, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ಮಂಡಳಿಯೇ ವಾಟ್ಸ್ಯಾಪ್ ಅಥವಾ ಎಸ್‌ಎಂಎಸ್ ಮೂಲಕ ಫಲಿತಾಂಶ ಕಳುಹಿಸಿದೆ.
ಗುರುವಾರ ಮಧ್ಯಾಹ್ನ 3ಕ್ಕೆ ಪ್ರಕಟ ಡಿಜಿ ಲಾಕರ್‌ನಲ್ಲಿ ಅಂಕಪಟ್ಟಿಯನ್ನು ಮಂಡಳಿಯು ಈ ಬಾರಿ ಐತಿಹಾಸಿಕ ಹೆಜ್ಜೆ ಇಟ್ಟಿದ್ದು, ವಿದ್ಯಾರ್ಥಿಗಳು ತಮ್ಮ ಅಧಿಕೃತ ಅಂಕಪಟ್ಟಿಯನ್ನು ಡಿಜಿ ಲಾಕರ್ ಮೂಲಕ ಪಡೆಯಲು ಅವಕಾಶ ಕಲ್ಪಿಸಿದೆ.
2025-26ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ- 1 ಫೆಬ್ರವರಿ 28ರಿಂದ ಆರಂಭವಾಗಿ ಮಾರ್ಚ್ 17ರವರೆಗೆ ನಡೆಯಿತು. ರಾಜ್ಯದ 1,217 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದವು. 5,174 ಕಾಲೇಜುಗಳ 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿ ಕೊಂಡಿದ್ದರು. ಕಲಾ ವಿಭಾಗದಲ್ಲಿ 1.42 ಲಕ್ಷ, ವಿಜ್ಞಾನ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯದಲ್ಲಿ 2.11 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಆಳ್ವಾಸ್ಗೆ ಮೊದಲ ರ್ಯಾಂಕ್
ಇದೇ ಪ್ರಥಮ ಬಾರಿಗೆ ದಾಖಲೆಯ ಶೇ. 86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ.

ರಾಜ್ಯಕ್ಕೆ ಮೂಡಬಿದರೆಯ ಆಳ್ವಾಸ್ ನ ದಿಶಾ ಪ್ರಥಮ.ಈಕೆಗೆ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕ.
ವಿಜ್ಞಾನ ವಿಭಾಗದಲ್ಲಿ ಕೋಲಾರದ ಸಹ್ಯಾದ್ರಿ ಕಾಲೇಜಿನ ಶ್ರೀಲಯ ಪ್ರಥಮ. 593 ಅಂಕ ಪಡೆದಿದ್ದಾರೆ.
ಕಲಾ ವಿಭಾಗದಲ್ಲಿ ಇಬ್ಬರಿಗೆ ಅರ್ಚನಾ ಮತ್ತು ಸಂಗೀತಾ ಗೆ 598 ಅಂಕ . ಇಬ್ಬರೂ ಕೊಟ್ಟೂರಿನ ಇಂದು ಪಿಯು ಕಾಲೇಜಿನವರು.

ವಾಣಿಜ್ಯದಲ್ಲಿ ದ್ವಿತಿಯ ರ್ಯಾಂಕ್ ತುಮಕೂರಿನ ವಿದ್ಯಾವಾಹಿನಿ ಕಾಲೇಜಿನ ವಿದ್ಯಾರ್ಥಿ ರೋಹನ್. 597 ಅಂಕ.


