ತೀರ್ಥಹಳ್ಳಿ | ಪಿಕಪ್ ವಾಹನ ಡಿಕ್ಕಿ ; ಬೈಕ್ ಸವಾರನಿಗೆ ಗಂಭೀರ ಗಾಯ

ಶಿವಮೊಗ್ಗ

ತೀರ್ಥಹಳ್ಳಿ, ಕೊಪ್ಪ-ತೀರ್ಥಹಳ್ಳಿ ಮಾರ್ಗದ ಮೇಲಿನ ಕುರುವಳ್ಳಿ ಸಮೀಪ ಇಂದು ಬೆಳಿಗ್ಗೆ ಕೋಳಿ ಸಾಗಿಸುತ್ತಿದ್ದ ಪಿಕಪ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ.

ಈ ಡಿಕ್ಕಿಯಲ್ಲಿ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿದ್ದು ಆತನನ್ನು ಸ್ಥಳಿಯ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯ ಮೂಲದವರು ಇತ್ತೀಚೆಗೆ ತಳುವೆ ಗ್ರಾಮದಲ್ಲಿ ನಿಧನರಾಗಿದ್ದ ಸಂಬಂಧಿಕರ ಪುಣ್ಯತಿಥಿ ಕಾರ್ಯದಲ್ಲಿ ಭಾಗವಹಿಸಲು ತೀರ್ಥಹಳ್ಳಿಗೆ ಬಂದಿದ್ದರು.

ಧಾರ್ಮಿಕ ವಿಧಿವಿಧಾನಗಳನ್ನು ಮುಗಿಸಿ ಇಂದು ಬೆಳಿಗ್ಗೆ ಬೈಕ್‌ನಲ್ಲಿ ವಾಪಸ್ ತೆರಳುತ್ತಿದ್ದಾಗ, ಮೇಲಿನ ಕುರುವಳ್ಳಿಯ ಮಹಾಲಕ್ಷ್ಮಿ ಹೋಟೆಲ್ ಎದುರು ಪಿಕಪ್ ವಾಹನ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು, ಬೈಕ್‌ನಲ್ಲಿದ್ದ ಉಳಿದ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೂಡಲೇ ಸ್ಥಳೀಯರ ನೆರವಿನೊಂದಿಗೆ ಗಾಯಾಳುಗಳನ್ನು ತೀರ್ಥಹಳ್ಳಿ ಪಟ್ಟಣದ ಜೆ.ಸಿ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Author