ಯಾದಗಿರಿ | ಕಾರು ಮತ್ತು ಖಾಸಗಿ ಬಸ್‌‍ ಭೀಕರ ಅಪಘಾತ ; ಆರು ಮಂದಿ ಸಜೀವ ದಹನ

ಯಾದಗಿರಿ

ಯಾದಗಿರಿ, ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ಕಾರು ಹಾಗೂ ಖಾಸಗಿ ಬಸ್‌‍ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಆರು ಮಂದಿ ಸಜೀವ ದಹನವಾಗಿದ್ದಾರೆ.

ಕೃಷ್ಣ ನಾಯಕ್(52), ಅನಂತ ಕಲಾ ನಾಯಕ್ (45), ಶರಣಪ್ಪ (36), ನಿಸರ್ಗ ಶರಣಪ್ಪ (30) ಇವರ ಪುತ್ರ ಸಿದ್ಧಾರ್ಥ ಶರಣಪ್ಪ (3) ಮತ್ತು ಶಶಿಕಲಾ (30) ಮೃತರು.ಮೃತ ಶರಣಪ್ಪ ದಂಪತಿಯ ಪತ್ರಿಯರಾದ ಅದ್ವಿಕಾ (5) ಮತ್ತು ಶ್ರೀನಿಧಿ (1.5 ವರ್ಷ) ಪರಿಸ್ಥಿತಿ ಚಿಂತಾಜನಕವಾಗಿದೆ. ಇವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.

ಪ್ರಾಥಮಿಕ ತನಿಖೆ ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳ ಪ್ರಕಾರ, ಕಾರಿನ ಟೈರ್ ಸ್ಫೋಟಗೊಂಡಿದ್ದು, ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಬೆಂಕಿಗೆ ಆಹುತಿಯಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಆರು ಜನ ಸಾವನ್ನಪ್ಪಿದ್ದಾರೆ.

ಮೃತರು ಹಾಗೂ ಗಾಯಾಳುಗಳು ಪರಸ್ಪರ ಸಂಬಂಧಿಕರು – ಪೃಥ್ವಿಕ್ ಶಂಕರ್, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ, ಯಾದಗಿರಿಯಾದಗಿರಿಯಿಂದ ರಾಯಚೂರು ಕಡೆ ಹೊರಟಿದ್ದ ಕಾರು, ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿವೆ. ಬಸ್ಸಿನಲ್ಲಿದ್ದ 20 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.

ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಕಾರು ಮತ್ತು ಬಸ್ ಸಂಪೂರ್ಣ ಸುಟ್ಟು ಕರಕಲಾಗಿವೆ. ಕಾರಿನಲ್ಲಿದ್ದ 8 ಪ್ರಯಾಣಿಕರ ಪೈಕಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಸುರಪುರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

Author