SSLC ಫಲಿತಾಂಶ ಏಪ್ರಿಲ್‌ 23ರ, ಇಂದು ಮಧ್ಯಾಹ್ನ 12ಕ್ಕೆ ಪ್ರಕಟ

ಕರ್ನಾಟಕ

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರದಿಂದ ಕಾಯುತ್ತಿದ್ದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1 ರ ಫಲಿತಾಂಶ ಗುರುವಾರ (ಏಪ್ರಿಲ್ 23) ಪ್ರಕಟವಾಗಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈ ಕುರಿತು ಅಧಿಕೃತ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಏಪ್ರಿಲ್ 23ರ ಮಧ್ಯಾಹ್ನ 12.00 ಗಂಟೆಗೆ ಸರಿಯಾಗಿ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದೆ. ಸಂಬಂಧಪಟ್ಟ ಶಾಲೆಗಳಿಗೂ ಸಹ ಇದೇ ಸಮಯದಲ್ಲಿ ಫಲಿತಾಂಶದ ಪಟ್ಟಿಯನ್ನು ಲಭ್ಯಗೊಳಿಸಲಾಗುವುದು.

ಈ ವರ್ಷದ ವಿಶೇಷತೆ ಡಿಜಿಲಾಕರ್‌ನಲ್ಲಿ ಅಂಕಪಟ್ಟಿ ಲಭ್ಯ!

ಈ ವರ್ಷ ಮಂಡಳಿಯು ಪ್ರಥಮ ಬಾರಿಗೆ ವಿಶೇಷ ಹೆಜ್ಜೆಯೊಂದನ್ನು ಇಟ್ಟಿದ್ದು, ವಿದ್ಯಾರ್ಥಿಗಳ ಅಧಿಕೃತ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ತಕ್ಷಣವೇ ‘ಡಿಜಿಲಾಕರ್’ನಲ್ಲಿ ಲಭ್ಯವಾಗುವಂತೆ ಮಾಡಿದೆ.

ಮಧ್ಯಾಹ್ನ 12 ಕ್ಕೆ ಅಂಕಪಟ್ಟಿ ಲಭ್ಯ

ವಿದ್ಯಾರ್ಥಿಗಳು ಮಧ್ಯಾಹ್ನ 12 ಗಂಟೆಯ ನಂತರ https://www.digilocker.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಡಿಜಿಲಾಕರ್‌ನಿಂದ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳುವ ಪ್ರಕ್ರಿಯೆ ಗೊತ್ತಿಲ್ಲದ ವಿದ್ಯಾರ್ಥಿಗಳಿಗಾಗಿ ಮಂಡಳಿಯು ವಿಡಿಯೋ ಲಿಂಕ್ ಒಂದನ್ನು ಹಂಚಿಕೊಂಡಿದೆ. ವಿದ್ಯಾರ್ಥಿಗಳು https://tinyurl.com/mw84wmh9 ಲಿಂಕ್ ಬಳಸಿ ಡೌನ್‌ಲೋಡ್ ಪ್ರಕ್ರಿಯೆಯನ್ನು ತಿಳಿದುಕೊಳ್ಳಬಹುದಾಗಿದೆ ಎಂದು ಮಂಡಳಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ ಚೆಕ್ ಮಾಡುವುದು ಹೇಗೆ?

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು 3 ವಿಧಾನಗಳ ಮೂಲಕ ಸುಲಭವಾಗಿ ಪಡೆಯಬಹುದಾಗಿದೆ.

ಅಧಿಕೃತ ವೆಬ್‌ಸೈಟ್:

https://karresults.nic.in/ ಲಿಂಕ್‌ಗೆ ಭೇಟಿ ನೀಡಿ ಫಲಿತಾಂಶ ವೀಕ್ಷಿಸಬಹುದು.

ಮೊಬೈಲ್ ಆಪ್:

KarnatakaOne Mobile App‘ ಮೂಲಕವೂ ರಿಸಲ್ಟ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ವಾಟ್ಸಾಪ್/ಎಸ್‌ಎಂಎಸ್‌:

ವಿದ್ಯಾರ್ಥಿಗಳು ಮಂಡಳಿಯಲ್ಲಿ ನೋಂದಾಯಿಸಿರುವ ತಮ್ಮ ಮೊಬೈಲ್ ಸಂಖ್ಯೆಗೆ ನೇರವಾಗಿ ವಾಟ್ಸಾಪ್ ಮತ್ತು ಎಸ್‌ಎಂ ಎಸ್ ಮೂಲಕ ಫಲಿತಾಂಶದ ಮಾಹಿತಿಯನ್ನು ರವಾನಿಸಲಾಗುತ್ತದೆ.

Author